ಬೆಂಗಳೂರು ಗ್ರಾಮಾಂತರ ಕ್ಷೇತ್ರ – ಇದನ್ನು ಅತೀ ಸೂಕ್ಷ್ಮ ಲೋಕಸಭಾ ಕ್ಷೇತ್ರವನ್ನಾಗಿ ಪರಿಗಣಿಸಿ, ಅರೆಸೇನಾ ಪಡೆಯನ್ನು ನಿಯೋಜಿಸುವಂತೆ ಚುನಾವಣಾ ಆಯೋಗ ಆದೇಶ ಹೊರಡಿಸಿದೆ…!
ಈ ಬಗ್ಗೆ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ ಸಿ ಎನ್ ಮಂಜುನಾಥ್ ಅವರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದರು, ಇದರ ಅನುಸಾರ ಈಗ ಕ್ರಮ ಕೈಗೊಳ್ಳಲಾಗಿದೆ…!!
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಪ್ರಭಾವಿಯೊಬ್ಬರು ಸ್ಪರ್ಧೆ ಮಾಡುತಿದ್ದು, ಇದರಿಂದ ಆಡಳಿತ ಯಂತ್ರವನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇದೆ, ಹೀಗಾಗಿ ಈ ಕ್ಷೇತ್ರಕ್ಕೆ ಹೆಚ್ಚುವರಿ ಪೊಲೀಸ್ ಪಡೆಯನ್ನು ಹಾಗೂ ಅರೆಸೇನಾ ಪಡೆಯನ್ನು ನಿಯೋಜನೆ ಮಾಡಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಯನ್ನು ನಡೆಸಲು ನೆರವಾಗಬೇಕು ಎಂದು ಚುನಾವಣಾ ಆಯೋಗಕ್ಕೆ ಡಾ ಸಿ ಎನ್ ಮಂಜುನಾಥ್ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದರು…!
ಈ ಮನವಿ ಪತ್ರವನ್ನು ಪಡೆದ ರಾಜ್ಯ ಮುಖ್ಯ ಚುನಾವಣಾ ಆಯೋಗವು ಪರಿಶೀಲನೆ ನಡೆಸಿ ಮುಂದಿನ ಕ್ರಮಕ್ಕಾಗಿ ಕೇಂದ್ರ ಮುಖ್ಯ ಚುನಾವಣಾ ಆಯೋಗಕ್ಕೆ ರವಾನೆ ಮಾಡಿತ್ತು, ಅಲ್ಲಿಂದ ಈಗ ತೀರ್ಮಾನ ಹೊರಬಿದ್ದಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನು ಅತೀ ಸೂಕ್ಷ್ಮ ಕ್ಷೇತ್ರ ಅಂತ ಪರಿಗಣಿಸಲಾಗಿದೆ…!!
ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿಗೆ ಪತ್ರ ಬರೆದಿರುವ ಮುಖ್ಯ ಚುನಾವಣಾ ಆಯೋಗವು ಅರೆ ಸೇನಾಪಡೆಯನ್ನು ನೇಮಿಸಲು ಸೂಚಿಸಿದೆ…!