
ದೇಶಾದ್ಯಂತ ದಿನದಿಂದ ದಿನಕ್ಕೆ ಹವಾಮಾನದಲ್ಲಿ ವೈಪರೀತ್ಯ ಕಂಡು ಬರುತ್ತಿದ್ದು, ದೇಶದ ಎಲ್ಲಾ ರಾಜ್ಯಗಳಲ್ಲಿಯೂ ಬಿಸಿಯ ಶಾಖಕ್ಕೆ ಜನರು ಗಂಗಾಲಾಗಿ ಹೋಗಿದ್ದಾರೆ.
ಇಂಥ ಸಮಯದಲ್ಲಿ ಈಗ ಅವಮಾನ ಇಲಾಖೆ ಒಂದು ಖುಷಿ ಸುದ್ದಿಯನ್ನು ನೀಡಿದೆ ದೇಶದ ಕೆಲವು ರಾಜ್ಯಗಳ ಕೆಲವು ಜಿಲ್ಲೆಗಳಲ್ಲಿ 24 ಗಂಟೆಗಳಲ್ಲಿ 35km ವೇಗದಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ.
ಮುಂದಿನ ಏಳು ದಿನಗಳವರೆಗೆ ಕೇರಳ ಮತ್ತು ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಲಘುವಾಗಿ ಸಾಧಾರಣ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯನ್ನು ಭಾರತೀಯ ಹವಾಮಾನ ಇಲಾಖೆ ಐಎಂಡಿ ತನ್ನ ವರದಿಯಲ್ಲಿ ತಿಳಿಸಿದೆ.
ಕರ್ನಾಟಕದಲ್ಲಿ ಬಿಸಿಲಿನ ಧಗೆ ಏರುತ್ತಿದ್ದು, ಕೆಲವು ದಿನಗಳ ಹಿಂದೆ ರಾಜ್ಯದ ಹಲವೆಡೆ ಮಳೆಯಾಗಿತ್ತು. ಆಮೇಲೆ ವರುಣ ದೇವ ಕಣ್ಮರೆಯಾಗಿದ್ದಾನೆ. ಮಳೆಯಿಲ್ಲದೇ ತಾಪಮಾನ ಹೆಚ್ಚಾಗುತ್ತಿದ್ದು, ಜನರು ಸಂಕಟ ಅನುಭವಿಸುತ್ತಿದ್ದಾರೆ. ಇದರ ನಡುವೆ ಮತ್ತೆ ರಾಜ್ಯದ ಹಲವೆಡೆ ಮಳೆ ಸುರಿಯುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ.
ಮೇ 1ರಂದು ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ ಮತ್ತು ತುಮಕೂರು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಮೇ 2ರಂದು ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ ಮತ್ತಯ ರಾಮನಗರ ಈ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯ ಆಗುವ ನಿರೀಕ್ಷೆ ಇದೆ.