
ಬೆಳಗಾವಿ – ಭಾರತ 140 ಕೋಟಿ ಜನಸಂಖ್ಯೆಯನ್ನು ಹೊಂದಿದೆ, ಒಂದು ವೇಳೆ ನರೇಂದ್ರ ಮೋದಿ ಅವರು ತೀರಿಕೊಂಡರೆ 140 ಕೋಟಿ ಜನರಲ್ಲಿ ಯಾರೂ ಪ್ರಧಾನಿ ಅಭ್ಯರ್ಥಿ ಇಲ್ಲವೇ…? ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ನಾಲಿಗೆ ಹರಿಬಿಟ್ಟಿದ್ದಾರೆ…!
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಮದಾಪುರದಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರದ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ತೀರಿಕೊಂಡರೆ ದೇಶದಲ್ಲಿ ಮುಂದೆ ಯಾರೂ ಪ್ರಧಾನಿ ಆಗೋದೇ ಇಲ್ವಾ ಎಂದು ಪ್ರಶ್ನಿಸಿದರು…?
ಮೋದಿ ತೀರಿಕೊಂಡರೆ 140 ಕೋಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿಯೇ ಇಲ್ವಾ? ಎಂದು ತಮ್ಮ ನಾಲಿಗೆಯನ್ನು ಹರಿಬಿಟ್ಟಿದ್ದಾರೆ…!
ಈಗಿನ ಯುವಕರು ಮೋದಿ ಮೋದಿ ಅನ್ನುತ್ತಾರೆ, ಮೋದಿಯ ನೆಕ್ಕುತ್ತೀರಾ? ರಾಜ್ಯದಲ್ಲಿ ಮತದಾರರು ಕಾಂಗ್ರೆಸ್ ಸರ್ಕಾರ ಬೇಕು ಅಂತಾರೆ, ಆದರೆ ಕೇಂದ್ರದಲ್ಲಿ ಮೋದಿನೇ ಬರಬೇಕು ಅಂತಾರೆ, ಮೋದಿ ಇಲ್ಲಿ ಬಂದು ನೋಡುತ್ತಾರಾ? ಇಲ್ಲಿ ಏನಾದರೂ ಸಮಸ್ಯೆ ಆದರೆ ಮೋದಿ ಬರುವುದಿಲ್ಲ, ಇಲ್ಲಿ ನಾವೇ ನಿಮ್ಮ ಸಮಸ್ಯೆಯನ್ನು ಆಲಿಸಬೇಕು, ನರೇಂದ್ರ ಮೋದಿ ಅವರು 3,000 ಕೋಟಿ ವಿಮಾನದಲ್ಲಿ ಪ್ರಯಾಣಿಸುತ್ತಾರೆ, 4 ಲಕ್ಷ ರೂಪಾಯಿ ಸೂಟ್ ಹಾಕಿಕೊಳ್ತಾರೆ ಎಂದು ವಾಗ್ದಾಳಿ ನಡೆಸಿದರು…!!
ಸಂಪಾದಕರ ನಿಲುವು
140 ಕೋಟಿ ಜನರ, ಒಂದು ದೇಶದ ಪ್ರಧಾನ ಮಂತ್ರಿಗಳ ಕುರಿತು ಈ ರೀತಿ ಹಗುರವಾದ ಶಬ್ದಗಳಲ್ಲಿ ಕೀಳಾಗಿ ಮಾತನಾಡಿರುವುದು ಶಾಸಕರ ಸಂಸ್ಕೃತಿ ಯಾವ ಮಟ್ಟದ್ದು ಎಂದು ಪ್ರತಿಬಿಂಬಿಸುತ್ತದೆ…!