
ದೆಹಲಿ : ದೆಹಲಿ ಅಬಕಾರಿ ಹಗರಣ ಪ್ರಕರಣದಲ್ಲಿ ಜೂನ್ ಒಂದರ ತನಕ ಷರತ್ತುಗಳ ಮೇಲೆ ಮಧ್ಯಂತರ ಜಾಮಿಯನ ಮೇಲೆ 50 ದಿನಗಳ ನಂತರ ಜೈಲಿನಿಂದ ಹೊರಬಂದ ನಂತರ ಶನಿವಾರ ತಮ್ಮ ಮೊದಲ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, 2024 ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿಗೆ ಮತ ಹಾಕುವುದು ಎಂದರೆ ಅಮಿತ್ ಶಾಗೆ ಮತ ಹಾಕುವುದು ಎಂದರ್ಥ. ಏಕೆಂದರೆ ನರೇಂದ್ರ ಮೋದಿ ಮುಂದಿನ ವರ್ಷ 75 ನೇ ವರ್ಷಕ್ಕೆ ಕಾಲಿಟ್ಟ ನಂತರ ಮತ್ತು ನರೇಂದ್ರ ಮೋದಿ ನಿವೃತ್ತರಾಗುತ್ತಾರೆ. ಅಮಿತ್ ಶಾ ಪ್ರಧಾನಿಯಾಗುತ್ತಾರೆ ಎಂದು ಹೇಳಿದ್ದಾರೆ.
ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ
ಯಾರೆಂದು ಬಿಜೆಪಿ ನಾಯಕರು ಕೇಳುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ 75 ವರ್ಷ ತುಂಬುತ್ತಿದ್ದು, ಎನ್ಡಿಎ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಮೊದಲು ಬಿಜೆಪಿ ಘೋಷಿಸಲಿ’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಪ್ರಶ್ನೆ ಮಾಡಿದ್ದಾರೆ.
ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಮೊದಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಸ್ಥಾನದಿಂದ ಯೋಗಿ ಆದಿತ್ಯನಾಥ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ನಂತರ ಅಮಿತ್ ಶಾ ಅವರನ್ನು ದೇಶದ ಪ್ರಧಾನಿಯನ್ನಾಗಿ ಮಾಡುತ್ತಾರೆ. ಪ್ರಧಾನಿ ಮೋದಿಯವರು ಅಮಿತ್ ಶಾ ಪರ ಮತ ಕೇಳುತ್ತಿದ್ದಾರೆ. ಮೋದಿಯವರ ಭರವಸೆಯನ್ನು ಅಮಿತ್ ಶಾ ಈಡೇರಿಸುತ್ತಾರಾ?’ ಎಂದು ಅರವಿಂದ್ ಕ್ರೇಜಿರುವಾಲ್ ಪ್ರಶ್ನೆ ಮಾಡಿದ್ದಾರೆ
ಭಾರತೀಯ ಜನತಾ ಪಾರ್ಟಿ 2019 ರಲ್ಲಿ 75 ವರ್ಷ ದಾಟಿದವರಿಗೆ ಟಿಕೆಟ್ ನೀಡುವುದಿಲ್ಲ ಎಂಬ ನಿರ್ಧಾರ ಮಾಡಿತ್ತು. ಹೀಗಾಗಿಯೇ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದ ಎಲ್ಕೆ ಆಡ್ವಾಣಿ, ಮುರುಳಿ ಮನೋಹರ ಜೋಶಿ, ಉಮಾಭಾರತಿ, ಬಿಸಿ ಖಂಡೂರಿ, ಭಗತ್ಸಿಂಗ್ ಕೋಶ್ಯಾರಿ, ಸುಮಿತ್ರಾ ಮಹಾಜನ್ ಸೇರಿದಂತೆ ಹಲವು ಹಿರಿಯ ನಾಯಕರು ಚುನಾವಣಾ ರಾಜಕಾರಣದಿಂದ ದೂರ ಸರಿಯುವಂತಾಯಿತು. ಈ ಕೆಲವು ನಿಯಮಗಳಿಂದ ಹಿರಿಯ ನಾಯಕರು ಅಪಸ್ವರ ಎತ್ತಿದರೆ ಅವರನ್ನು ಸಮಾಧಾನಪಡಿಸುವುದು ಸವಾಲಾಗಲಿದೆ ಎಂಬ ಲೆಕ್ಕಾಚಾರದಲ್ಲಿ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಜೋಡಿ ಈ ನಿರ್ಧಾರ ಕೈಗೊಂಡಿತ್ತು.
ಅರವಿಂದ್ ಕೇಜ್ರಿವಾಲ್ ಪ್ರಶ್ನೆಗೆ ತಿರುಗೇಟು ಕೊಟ್ಟ ಅಮಿತ್ ಶಾ
ಹೈದರಾಬಾದ್ನಲ್ಲಿ ಬಿಜೆಪಿ ಅಭ್ಯರ್ಥಿಯ ಪರ ಪ್ರಚಾರ ನಡೆಸುತ್ತಿರುವ ಅಮಿತ್ ಶಾ ಸುದ್ದಿಗಾರರ ಮಾತನಾಡುತ್ತಾ , ‘ಕೇಜ್ರಿವಾಲ್ ಅವರು ಬಿಜೆಪಿ ಗೆದ್ದರೆ ಅಮಿತ್ ಶಾ ಪ್ರಧಾನಿಯಾಗುತ್ತಾರೆ ಎಂದಿದ್ದಾರೆ. ಆದರೆ ಕೇಜ್ರಿವಾಲ್ ಮತ್ತು ಅವರ ಕಂಪನಿ ಕಂಪನಿ ಮತ್ತು ಇಂಡಿಯಾ ಮೈತ್ರಿಕೂಟಕ್ಕೆ ನಾನು ಹೇಳಲು ಇಷ್ಟಪಡುತ್ತೇನೆ, ಬಿಜೆಪಿಯ ಸಂವಿಧಾನದಲ್ಲಿ ಅಂತಹ ಯಾವುದೇ 75 ವರ್ಷಕ್ಕೆ ನಿವೃತ್ತಿ ಎನ್ನುವ ಉಲ್ಲೇಖ ಇಲ್ಲ. ಮೋದಿಯವರು ಅಧಿಕಾರಾವಧಿಯನ್ನು ಸಂಪೂರ್ಣವಾಗಿ ಪೂರ್ಣಗೊಳಿಸಲಿದ್ದಾರೆ ಮತ್ತು ಭವಿಷ್ಯದಲ್ಲಿ ಪ್ರಧಾನಿ ಮೋದಿಯವರೇ, ಈ ವಿಷಯದಲ್ಲಿ ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ’ ಎಂದು ಸ್ಪಷ್ಟಪಡಿಸಿದರು
ಲೋಕಸಭೆ ಚುನಾವಣೆ ಈಗಾಗಲೇ ಮೂರನೇ ಹಂತ ಮುಗಿದಿದ್ದು 4ನೇ ಹಂತದ ಮತದಾನಕ್ಕೆ ಇನ್ನೂ ಕೆಲವೇ ದಿನಗಳ ಬಾಕಿ ಇರುವ ಹೊತ್ತಿನಲ್ಲಿ ಬಿಜೆಪಿ ಇಂತಹದ್ದೊಂದು ಸ್ಪಷ್ಟೀಕರಣ ನೀಡಿದೆ.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿ ತಿರುಗೇಟು ನೀಡಿದ್ದಾರೆ
ರಕ್ಷಣಾ ಸಚಿವ ರಾಜನಾಥ ಸಿಂಗ್ ಟ್ವೀಟ್ ಮಾಡಿ, ‘ಕೇಜ್ರಿವಾಲ್ ಅವರು ಬಿಜೆಪಿ ಬಗ್ಗೆ ಹೇಳಿರುವ ಆಧಾರರಹಿತ ಮಾತುಗಳು ಈ ಚುನಾವಣೆಯಲ್ಲಿ ಬಿಜೆಪಿ ಮತ್ತು ಎನ್ಡಿಎ ಮೈತ್ರಿ ಸಾಧಿಸಲಿವೆ ಎಂಬುದನ್ನು ಸ್ಪಷ್ಟಪಡಿಸುತ್ತವೆ. ಮೋದಿಯವರ ನೇತೃತ್ವದಲ್ಲಿ ಬಿಜೆಪಿ ಅದ್ಭುತ ಗೆಲುವು ಕಾಣಲಿದೆ. ಮೋದಿ ಅವರೇ ಬಾರಿಗೆ ಪ್ರಧಾನಿಯಾಗುತ್ತಾರೆ ಮತ್ತು ಅವಧಿಯನ್ನು ಪೂರ್ಣಗೊಳಿಸುತ್ತಾರೆ. ಇದರಲ್ಲಿ ಬಿಜೆಪಿ, ಎನ್ಡಿಎನಲ್ಲಿ ಸಂದೇಹವಿಲ್ಲ’ ಎಂದಿದ್ದಾರೆ.