
ಹೈಲೈಟ್ಸ್
ವಿಧಾನಪರಿಷತ್ ಚುನಾವಣೆ ಬಿಜೆಪಿಗೆ ಬಂಡಾಯದ ಬಿಸಿ
ಬಿಜೆಪಿ ವಿರುದ್ಧ ತೊಡೆತಟ್ಟಿದ ಉಡುಪಿ ಮಾಜಿ ಶಾಸಕ ಕೆ ರಘುಪತಿ ಭಟ್
ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ
ಜೂನ್ 3 ರಂದು ನಡೆಯಲಿರುವ ರಾಜ್ಯ ವಿಧಾನಪರಿಷತ್ ಚುನಾವಣೆಗೆ ಪಕ್ಷ ಟಿಕೆಟ್ ನೀಡಲಿಲ್ಲ ಎಂದು ಪಕ್ಷದ ಮೇಲೆ ಬೇಸರಗೊಂಡು ಉಡುಪಿ ಬಿಜೆಪಿ ಮಾಜಿ ಶಾಸಕ ಕೆ ರಘುಪತಿ ಭಟ್ ನೈರುತ್ಯ ಪದವೀಧರರ ಕ್ಷೇತ್ರದಿಂದ ಇಂದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು…!
ಕಾರ್ಯಕರ್ತರ ಧ್ವನಿಯಾಗಿ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸುತಿದ್ದೇನೆ, ಗೆದ್ದ ಮೇಲೆ ನಾನಾಗಿಯೇ ಬಿಜೆಪಿ ಕಚೇರಿಗೆ ಹೋಗುವೆ, ಸೋತರೂ ಬಿಜೆಪಿ ಕಾರ್ಯಕರ್ತನಾಗಿಯೇ ಇರುವೆ ಎಂದು ಹೇಳಿದರು…!!
2023ರ ವಿಧಾನಸಭಾ ಚುನಾವಣೆ ಯಲ್ಲಿ ಪಕ್ಷದಿಂದ ಟಿಕೆಟ್ ಕೈತಪ್ಪಿದಾಗ ಕಾಂಗ್ರೆಸ್ ಅಥವಾ ಪಕ್ಷೇತರರಾಗಿ ಸ್ಪರ್ಧಿಸಲು ಒತ್ತಡ ಇತ್ತು…!
ಆದರೂ ಪಕ್ಷದ ಅಭ್ಯರ್ಥಿಯ ಪರ ಕೆಲಸ ಮಾಡಿದೆ…!!
ಲೋಕಸಭೆ ಚುನಾವಣೆಯಲ್ಲೂ ಪೂರ್ಣವಾಗಿ ತೊಡಗಿಕೊಂಡೆ…!
ಆದರೆ ಬಿಜೆಪಿ ನಾಯಕರು ನಾನು ಮೂರು ಬಾರಿ ಗೆದ್ದಿರುವ ಮಾಜಿ ಶಾಸಕ ಎಂಬುದನ್ನು ಮರೆತು ಕಚೇರಿಯಲ್ಲಿದ್ದ ನನ್ನ ಭಾವಚಿತ್ರವನ್ನು ತೆಗೆದು ಹಾಕಿದರು…!!
ಕನಿಷ್ಠ ಮನ್ನಣೆ, ಪ್ರೀತಿ, ಗೌರವವನ್ನು ತೋರಿಸಿಲ್ಲ ಎಂದು ದೂರಿದರು…!
ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ದಶಕಗಳ ಪದ್ಧತಿ ಮುರಿದಿದ್ದಾರೆ. ನಾನು ಯಾರನ್ನೂ ಸೋಲಿಸಲು ನಿಲ್ಲುತ್ತಿಲ್ಲ. ಜನರ ಸೇವೆ ಮಾಡಲು ಸ್ಪರ್ಧಿಸುತ್ತಿರುವೆ…!
ಮೋದಿಯವರ ಆದರ್ಶ, ಡಾ| ವಿ ಎಸ್ ಆಚಾರ್ಯರ ಮಾರ್ಗ ದರ್ಶನ ಹಾಗೂ ಕರಂಬಳ್ಳಿ ಸಂಜೀವ ಶೆಟ್ಟಿಯವರು ನೀಡಿದ್ದ ಪಾಠ ಸದಾ ನನ್ನೊಂದಿಗೆ ಇರುತ್ತದೆ ಮತ್ತು ನಾನು ಎಂದಿಗೂ ಬಿಜೆಪಿಗನೇ ಆಗಿರುವೆ ಎಂದರು…!!