
ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಲೋಕಸಭಾ ಚುನಾವಣೆಯನ್ನು ಎದುರಿಸುತ್ತಿದ್ದಾರೆ…!
ಜೂನ್ 1ರಂದು ಮಂಡಿ ಕ್ಷೇತ್ರದಲ್ಲಿ ಮತದಾನ ನಡೆಯಲಿದ್ದು, ಅಲ್ಲಿ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ…!!
ಇದರ ಬೆನ್ನಲ್ಲೇ, ಕಂಗನಾ ರಣಾವತ್ ಅವರು ಮಹತ್ವದ ಘೋಷಣೆಯೊಂದನ್ನು ಮಾಡಿದ್ದು, ಲೋಕಸಭಾ ಚುನಾವಣೆಯಲ್ಲಿ ನಾನು ಗೆದ್ದರೆ ನಟನೆಯನ್ನು ಬಿಟ್ಟುಬಿಡುತ್ತೇನೆ ಹಾಗೂ ಸಿನಿಮಾ ರಂಗವನ್ನು ಸಹ ತೊರೆಯುತ್ತೇನೆ ಎಂಬುದಾಗಿ ಹೇಳಿದ್ದಾರೆ…!
ಆಜ್ ತಕ್ ಸುದ್ದಿವಾಹಿನಿಗೆ ಸಂದರ್ಶನ ನೀಡುವ ವೇಳೆ , ನೀವು ಮಂಡಿ ಲೋಕಸಭೆಯಲ್ಲಿ ಗೆಲುವು ಸಾಧಿಸಿದರೆ ಏನೆಲ್ಲ ಮಾಡುತ್ತೀರಿ ಎಂಬ ಪ್ರಶ್ನೆಗೆ ಕಂಗನಾ ರಣಾವತ್ ಈ ರೀತಿಯಲ್ಲಿ ಉತ್ತರಿಸಿದರು…!!
ಕಂಗನಾ ರಣಾವತ್ ನಿರ್ದೇಶಿಸಿ ನಟಿಸಿರುವ ಎಮರ್ಜೆನ್ಸಿ ಸಿನಿಮಾ ಇನ್ನು ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ…!
ಈ ಚಲನಚಿತ್ರವು 1975 ರಿಂದ 1977 ರವರೆಗಿನ 21 ತಿಂಗಳ ತುರ್ತು ಪರಿಸ್ಥಿತಿಯ ಅವಧಿಯನ್ನು ಆಧರಿಸಿದ್ದು, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ರಾಷ್ಟ್ರದಾದ್ಯಂತ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದರು, ಇದರಲ್ಲಿ ಕಂಗನಾ ರಣಾವತ್ ಇಂದಿರಾ ಗಾಂಧಿ ಪಾತ್ರವನ್ನು ನಿರ್ವಹಿಸಿದ್ದಾರೆ…!!