
ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜೂನ್ 1ರ ತನಕ ಮಧ್ಯಂತರ ಜಾಮೀನು ನೀಡಿತ್ತು ಮಧ್ಯಂತರ ಜಾಮೀನನ್ನು ಇನ್ನೂ ಏಳು ದಿನಗಳ ಕಾಲ ವಿಸ್ತರಿಸುವಂತೆ ಕೋರಿ ಅರವಿಂದ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಲೋಕಸಭೆ ಚುನಾವಣೆಗೆ ಪ್ರಚಾರಕ್ಕಾಗಿ ಮೇ 10 ರಂದು ಜೂನ್ ಒಂದರ ತನಕ ಷರತ್ತು ಬದ್ಧ ಮಧ್ಯಂತರ ಜಾಮೀನು ಸುಪ್ರೀಂ ಕೋರ್ಟ್ ನೀಡಿತ್ತು.
ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು ನೀಡುವ ಸಂದರ್ಭದಲ್ಲಿ ಸುಪ್ರೆಂಕೋರ್ಟ್, ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಈ ನಿರ್ಧಾರ ಸೂಕ್ತ, ಅವರಿಗೆ ಯಾವುದೇ ಅಪರಾಧ ಇತಿಹಾಸವಿಲ್ಲ. ಅವರ ಮೇಲೆ ಇರುವ ಆರೋಪಗಳು ಸಾಬೀತಾಗಿ ಶಿಕ್ಷೆಯಾಗಿಲ್ಲ ಎಂದು ಹೇಳಿತ್ತು. ಅಷ್ಟೇ ಅಲ್ಲದೆ ಯಾವುದೇ ಸಾಕ್ಷಿ ಜತೆ ಮಾತನಾಡದಂತೆ ಅವರಿಗೆ ಸುಪ್ರೀಂ ಕೋರ್ಟ್ ಸೂಚಿಸಿತ್ತು.
ಇದೀಗ ಮಧ್ಯಂತರ ಜಾಮೀನನ್ನು ಇನ್ನು ಏಳು ದಿನ ವಿಸ್ತರಿಸಬೇಕೆಂದು ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ತನ್ನ ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ ತೂಕ ಕೂಡ ಕಮ್ಮಿಯಾಗಿದೆ ಇನ್ನು ಹೆಚ್ಚಿನ ವೈದ್ಯಕೀಯ ಪರೀಕ್ಷೆ ಮಾಡಬೇಕಾಗಿದ್ದು ಅದಕ್ಕಾಗಿ ಇನ್ನು ಏಳು ದಿನ ಜಾಮೀನು ವಿಸ್ತರಿಸಬೇಕೆಂದು ಅಗತ್ಯ ವೈದ್ಯಕೀಯ ಪರೀಕ್ಷೆಗಳನ್ನು ಪೂರ್ಣಗೊಳಿಸಲು ಜಾಮೀನು ವಿಸ್ತರಣೆ ಬೇಕಿದ್ದು, ವಿಸ್ತರಣೆಯನ್ನು ಪರಿಗಣಿಸುವಂತೆ ಸುಪ್ರೀಂ ಕೋರ್ಟಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೋರಿದ್ದಾರೆ