
ಬೆಂಗಳೂರು: ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರು 60ನೇ ಪುಣ್ಯತಿಥಿ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸಿಎಂ ಸಿದ್ದರಾಮಯ್ಯ ವಿಧಾನಸೌಧ ಆವರಣದಲ್ಲಿ ಪಂಡಿತ್ ನೆಹರೂ ಅವರ ಭಾವಚಿತ್ರಕ್ಕೆ ಹೂಮಾಲೆ ಹಾಕಿ ಶ್ರದ್ಧಾಂಜಲಿ ಸಲ್ಲಿಸಿದ್ದರು.
ನಂತರ ಸಿಎಂ ಸಿದ್ದರಾಮಯ್ಯ ಅವರು ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಪ್ರಧಾನಿ ಮೋದಿ ಅವರನ್ನು ಟೀಕಿಸಿದ್ದಾರೆ ವಿಕಸಿತ ಭಾರತ ಮಾಡಲು ದೇವರೇ ಕಳುಹಿಸಿದ್ದಾನೆ. 2047ರ ತನಕ ಸೇವೆ ಮಾಡಲು ದೇವರು ಕಳುಹಿಸಿದ್ದಾನೆ ಎಂದು ಮೋದಿ ಹೇಳುತ್ತಾರೆ. ಮತಕ್ಕಾಗಿ ಹಿಂದೂ, ಮುಸ್ಲಿಮರನ್ನು ವಿಭಜಿಸಿ ಮಾತನಾಡುತ್ತಾರೆ. ಭಾಷಣಗಳಲ್ಲಿ ಮುಸ್ಲಿಮರ ವಿರುದ್ಧ ಮಾತನಾಡುತ್ತಾರೆ. ಅವರಿಗೆ ಬಹುತ್ವದಲ್ಲಿ ನಂಬಿಕೆಯೇ ಇಲ್ಲ ಎಂದು ಟೀಕಿಸಿದರು.
ಮೋದಿಯವರ ವಿಕಸಿತ ಭಾರತದ ಅಜೆಂಡ ಹಿಂದೂ ರಾಷ್ಟ್ರ ಮಾಡೋದು ಅಂದ್ರೆ ಭಾರತ ಹಿಂದೂ ರಾಷ್ಟ್ರ ಆಗಲು ಸಾಧ್ಯವೇ ಇಲ್ಲ ಹಿಂದೂ ರಾಷ್ಟ್ರ ಕನಸಿನ ಮಾತು ಕಾಂಗ್ರೆಸ್ ಸರಕಾರ ಈ ಬಾರಿ ಅಧಿಕಾರಕ್ಕೆ ಬಂದರೆ ಎಲ್ಲರನ್ನು ಜೊತೆಯಲ್ಲಿ ಕರೆದುಕೊಂಡು ಹೋಗುತ್ತದೆ, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಮೋದಿಯವರು ಏನೇನೋ ಮಾತನಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ .
ಇನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಲೋಕಸಭಾ ಕ್ಷೇತ್ರಗಳಲ್ಲೂ ಗೆಲ್ಲುತ್ತೀವಿ ಎಂದು ಬಿಜೆಪಿಯವರು ಹೇಳುತ್ತಿದ್ದರು. ಈಗ ಕಾಂಗ್ರೆಸ್ ನವರು 10 ರಿಂದ 12 ಸೀಟ್ ಗೆಲ್ಲಬಹುದು ಎಂದು ಬಿಜೆಪಿಯವರು ಹೇಳ್ತಿದ್ದಾರೆ ಎಂದ ಸಿಎಂ ಸಿದ್ದರಾಮಯ್ಯ, ಈಗ ಅವರಿಗೂ ಗೊತ್ತಾಗಿರಬಹುದು. ಕಾಂಗ್ರೆಸ್ ಪಕ್ಷ 15ರಿಂದ 20 ಸೀಟ್ ಗೆಲ್ತೀವಿ. ಜನ ನಮ್ಮನ್ನ ಗುರ್ತಿಸಲು ಪ್ರಾರಂಭಿಸಿದ್ದಾರೆ. ನಮ್ಮ ಕೆಲಸಗಳನ್ನ ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.
ಪ್ರಧಾನಿ ಮೋದಿ ಅವರ ಹೇಳಿಕೆಗೆ ಕಾಂಗ್ರೆಸ್ ನಾಯಕರಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಕರ್ನಾಟಕದಲ್ಲಿ ಸಚಿವ ಮಹದೇವಪ್ಪ ನಂತರ ಇದೀಗ ಸಿಎಂ ಸಿದ್ದರಾಮಯ್ಯ ಅವರು ಮೋದಿ ಅವರ ಮಾತಿಗೆ ತಿರುಗೇಟು ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಏನು ಹೇಳಿದ್ದರು

ಪ್ರಧಾನಿ ಮೋದಿಯವರು ಮೊನ್ನೆ ಶುದ್ದಿವಾಹಿನಿ ಒಂದಕ್ಕೆ ಸಂದರ್ಶನ ನೀಡುವಾಗ,
ನನ್ನನ್ನು ಒಂದು ಉದ್ದೇಶಕ್ಕಾಗಿ ದೇವರು ಇಲ್ಲಿಗೆ ಕಳುಹಿಸಿದ್ದಾನೆ ಎಂಬುದು ನನಗೆ ಮನವರಿಕೆಯಾಗಿದೆ. ಆ ಉದ್ದೇಶವನ್ನು ಸಾಧಿಸಿದ ನಂತರ, ನನ್ನ ಕೆಲಸ ಒಂದೇ ಆಗಿರುತ್ತದೆ. ಅದಕ್ಕಾಗಿಯೇ ನಾನು ನನ್ನನ್ನು ಸಂಪೂರ್ಣವಾಗಿ ದೇವರಿಗೆ ಅರ್ಪಿಸಿಕೊಂಡಿದ್ದೇನೆ. ದೇವರು ನನಗೆ ಒಂದು ನಿರ್ದಿಷ್ಟ ಉದ್ದೇಶಕ್ಕಾಗಿ ಸಾಮರ್ಥ್ಯ, ಸ್ಫೂರ್ತಿ ಮತ್ತು ಶಕ್ತಿ ನೀಡಿದ್ದಾನೆ ಎಂದು ಭಾವಿಸುತ್ತೇನೆ ಎಂದು ಹೇಳಿದ್ದರು.