
ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಸರಕಾರ ರಚನೆಯತ್ತ ದಾಪುಗಾಲು…!
ಅರುಣಾಚಲ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯುತ್ತಿದೆ…!
ಇದೀಗ 60 ವಿಧಾನಸಭಾ ಕ್ಷೇತ್ರಗಳ ಪೈಕಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳು 43 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ…!!
ಉಳಿದಂತೆ NPP 6 ಕ್ಷೇತ್ರಗಳಲ್ಲಿ, ಹಾಗೂ ಇತರರು 9 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ…!
ಇತ್ತ ಸಿಕ್ಕಿಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಕೂಡ ಪ್ರಗತಿಯಲ್ಲಿದ್ದು ಸಿಕ್ಕಿಂ ಕ್ರಾಂತಿ ಮೋರ್ಚಾ ಕ್ಲೀನ್ ಸ್ವೀಪ್ ಮಾಡುವ ಸನಿಹದಲ್ಲಿದೆ…!
ಒಟ್ಟು 32 ವಿಧಾನಸಭಾ ಕ್ಷೇತ್ರಗಳ ಪೈಕಿ ಆಡಳಿತಾರೂಢ ಸಿಕ್ಕಿಂ ಕ್ರಾಂತಿ ಮೋರ್ಚಾ 31 ಸ್ಥಾನಗಳಲ್ಲಿ ಭರ್ಜರಿ ಮುನ್ನಡೆ ಸಾಧಿಸಿದೆ…!!
ಇತ್ತ ವಿಪಕ್ಷ ಸಿಕ್ಕಿಂ ಡೆಮೊಕ್ರೆಟಿಕ್ ಫ್ರಂಟ್ ಕೇವಲ 1 ಸ್ಥಾನದಲ್ಲಿ ಮುನ್ನಡೆ ಕಾಯ್ದುಕೊಂಡಿದೆ…!