
ಬೆಂಗಳೂರು: ರಾಜ್ಯ ಕಾಂಗ್ರೆಸಿನ ಪ್ರದೇಶ ಯುವ ಕಾರ್ಯದರ್ಶಿ ಎಸ್.ಎಂ. ಜಗದೀಶ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಲಾಗಿದೆ.
ಈ ಬಾರಿಯ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ
ಪಕ್ಷ ಕೊಟ್ಟ ಜವಾಬ್ದಾರಿಯನ್ನು ಬಿಟ್ಟು ಬೇರೆ ಪಕ್ಷದವರ ಜೊತೆ ಚುನಾವಣೆ ಪ್ರಚಾರ ಮಾಡಿದ್ದು ಹಾಗೂ ಪಕ್ಷದ ನಾಯಕರುಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು
ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ ಎಂದು ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷ ಕರ್ನಾಟಕ ಪ್ರದೇಶ ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿ ವಜಾಗೊಳಿಸಿದೆ.
ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ಕೆ.ರೆಹಮಾನ್ ಖಾನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.