
ನಾಗಪುರ : ಮಣಿಪುರವು ಕಳೆದ ಒಂದು ವರ್ಷದಿಂದ ಶಾಂತಿಗಾಗಿ ಕಾಯುತ್ತಿದೆ. ಅಲ್ಲಿನ ಹಿಂಸಾಚಾರವನ್ನು ನಿಲ್ಲಿಸುವುದಕ್ಕೆ ಆದ್ಯತೆ ನೀಡಬೇಕು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ನಾಗಪುರ ರೇಶಿಂಬಾಗ್ನ ಡಾ.ಹೆಡಗೇವಾರ್ ಸ್ಮೃತಿ ಭವನದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕರ್ತ ವಿಕಾಸ ವರ್ಗ-ದ್ವಿತೀಯದ ಸಮಾರೋಪ ಕಾರ್ಯಕ್ರಮದಲ್ಲಿ ಆರ್ಎಸ್ಎಸ್ ಪ್ರಶಿಕ್ಷಣಾರ್ಥಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು
ಮಣಿಪುರ ಶಾಂತಿಗಾಗಿ ಕಳೆದ ಒಂದು ವರ್ಷದಿಂದ ಶಾಂತಿಗಾಗಿ ಕಾಯುತ್ತಿದೆ, ಕಳೆದ 10 ವರ್ಷಗಳಿಂದ ರಾಜ್ಯವು ಶಾಂತಿಯುತವಾಗಿತ್ತು. ಆದರೆ ಇದ್ದಕ್ಕಿದ್ದಂತೆ ರಾಜ್ಯದಲ್ಲಿ ಬಂದೂಕು ಸಂಸ್ಕೃತಿ ಹೆಚ್ಚಾಗಿದೆ
ಆದ್ಯತೆಯ ಮೇಲೆ ಇಲ್ಲಿನ ಸಂಘರ್ಷ ಪರಿಹರಿಸುವ ಕೆಲಸವಾಗಬೇಕು” ಎಂದು ಅವರು ಹೇಳಿದ್ದಾರೆ.
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಜನರ ತೀರ್ಪಿನಂತೆ ಪ್ರತಿಯೊಂದು ನಡೆಯುತ್ತಿದೆ. ಈ ವಿಷಯದ ಬಗ್ಗೆ ಸಂಘ ಯಾವುದೇ ಚರ್ಚೆ ಮಾಡುವುದಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಡಾ| ಮೋಹನ್ ಭಾಗವತ್ ಹೇಳಿದ್ದಾರೆ.
ಲೋಕಸಭೆಯ ಚುನಾವಣೆ ಸಂಪನ್ನವಾಗಿದೆ. ಅದರ ಫಲಿತಾಂಶ ಬಂದಿದ್ದು, ಹೊಸ ಸರಕಾರದ ರಚನೆಯೂ ಆಗಿದೆ.
ಚುನಾವಣೆ ಮುಗಿದು ಅದರ ಫಲಿತಾಂಶ ಬಂದ ಮೇಲೆಯೂ, ಇನ್ನೂ ಅದರ ಕುರಿತು ಏಕೆ, ಹೇಗೆ ಎನ್ನುವ ಚರ್ಚೆಗಳು ನಡೆಯುತ್ತಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯ ಪ್ರಕಾರ ದೇಶದಲ್ಲಿ ಪ್ರತೀ 5 ವರ್ಷಕ್ಕೊಮ್ಮೆ ಚುನಾವಣೆಯ ನಡೆಯುತ್ತದೆ. ಅದು ಸಹಜ ಪ್ರಕ್ರಿಯೆ. ಚುನಾವಣೆಗೆ ಅದರದ್ದೇ ಆದ ನಿಯಮ, ಮಾನದಂಡಗಳಿವೆ. ಚುನಾವಣಾ ಪ್ರಚಾರದ ಸಮಯದಲ್ಲಿ ಜನರು ಪರಸ್ಪರ ನಿಂದನೆ, ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಳ್ಳುವುದು, ನಕಲಿ ಸುದ್ದಿಗಳನ್ನು ಹರಡುವುದು ಸರಿಯಲ್ಲ.
ವಿರೋಧಪಕ್ಷ ಅನ್ನೋದಕ್ಕಿಂತ ನಾವು ಪ್ರತಿಪಕ್ಷ ಎನ್ನಬೇಕು ಒಂದು ಆಡಳಿತ ಪಕ್ಷ ಒಂದು ವಿರೋಧ ಪಕ್ಷ ಇರಲೇಬೇಕು ಅಂದರು.
ಈ ಬಾರಿಯ ಚುನಾವಣೆಯಲ್ಲಿಯೂ ಎಲ್ಲ ಚುನಾವಣೆಗಳಂತೆ ಆರ್ಎಸ್ಎಸ್, ಸಾರ್ವಜನಿಕ ಅಭಿಪ್ರಾಯಗಳನ್ನು ರೂಪಿಸುವ ‘ಕರ್ತವ್ಯ’ವನ್ನು ನಿಭಾಯಿಸಿದೆ. ನಾವು ಪ್ರತಿ ವರ್ಷವೂ ಇದನ್ನು ಮಾಡುತ್ತೇವೆ. ಈ ವರ್ಷವೂ ಮಾಡಿದ್ದೇವೆ’ ಎಂದು ಅವರು ಪುನರುಚ್ಚರಿಸಿದರು.
ರಾಷ್ಟ್ರೀಯ ಸ್ವಯಂಸೇವಕ ಸಂಘ ಯಾವುದರ ಬಗ್ಗೆಯೂ ಕೂಡ ಪ್ರಶ್ನೆ ಮಾಡುವುದಿಲ್ಲ ಎಂದರು.