
ಒರಿಸ್ಸಾದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಮುಖಂಡ ಮೋಹನ್ ಚರಣ್ ಮಾಝಿ ಇಂದು ಸಂಜೆ ಪ್ರಮಾಣ ವಚನವನ್ನು ಸ್ವೀಕರಿಸಿದರು…!
ಪ್ರಮಾಣ ವಚನ ಕಾರ್ಯಕ್ರಮ ಸಮಾರಂಭದಲ್ಲಿ ಒಡಿಶಾ ರಾಜ್ಯಪಾಲರಾದ ರಘುಬರ್ ದಾಸ್ ಅವರು ಮೋಹನ್ ಚರಣ್ ಮಾಝಿ ಅವರಿಗೆ ಪ್ರಮಾಣ ವಚನ ಬೋಧಿಸಿದರು…!!
ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ಆಡಳಿತ ಇರುವ ಮುಖ್ಯಮಂತ್ರಿಗಳು ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸಾಕ್ಷಿಯಾದರು…!
ಇವರು ಒರಿಸ್ಸಾದ ಮೊಟ್ಟ ಮೊದಲ ಬಿಜೆಪಿ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ…!!
25 ವರ್ಷಗಳ ಕಾಲ ಸುದೀರ್ಘವಾಗಿ ಆಡಳಿತ ನಡೆಸಿದ ನವೀನ್ ಪಟ್ನಾಯಕ್ ನೇತೃತ್ವದ ಬಿಜು ಜನತಾದಳ ಈ ಬಾರಿಯ ಚುನಾವಣೆಯಲ್ಲಿ ಹೀನಾಯವಾಗಿ ಸೋತ ಬಳಿಕ ಕೇಸರಿ ಪಕ್ಷ ಮೊಟ್ಟ ಮೊದಲ ಬಾರಿಗೆ ಒಡಿಶಾದಲ್ಲಿ ಸರ್ಕಾರವನ್ನು ರಚಿಸಿದೆ…!