
ಬೆಂಗಳೂರು: ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಿ ಗೆಜೆಟ್ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ. ರೀಟೆಲ್ ಸೇಲ್ಸ್ ಟ್ಯಾಕ್ಸ್ ದರವನ್ನು ಹೆಚ್ಚಳ ಮಾಡಿ ಆದೇಶಿಸಿದೆ, ರಾಜ್ಯ ಬಿಜೆಪಿ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ,
ರಾಜ್ಯ ಡಿಜಿಪಿಯವರೇ ಸಿದ್ದರಾಮಯ್ಯ ಕಾಣೆಯಾಗಿದ್ದಾರೆ ಹುಡುಕಿಕೊಡಿ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ತಮ್ಮ X ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯನವರ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಪ್ರತಿಪಕ್ಷದಲ್ಲಿ ಇದ್ದಾಗ ಬಿಜೆಪಿ ಸರಕಾರದ ವಿರುದ್ಧ ಪೆಟ್ರೋಲ್ ದರ ಹೆಚ್ಚಳವನ್ನು ವಿರೋಧಿಸಿ ಬೈಕಿನ ಸವಯಾತ್ರೆ ಮಾಡಿದ ಪ್ರತಿಭಟನೆಯ ಫೋಟೋವನ್ನು ಹಾಕಿ ಡಿಜಿಪಿ ಅವರಿಗೆ ಟ್ಯಾಗ್ ಮಾಡಿದ್ದಾರೆ.!
ಆರ್ ಅಶೋಕ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಏನು ಬರೆದಿದ್ದರು.
ಟ್ರೋಲ್, ಡೀಸೆಲ್ ಬೆಲೆ ಜಾಸ್ತಿಯಾದರೆ ಜನರಿಗೆ ಸೈಕಲ್, ಎತ್ತಿನಗಾಡಿ, ಟಾಂಗಾ ಸವಾರಿಯೇ ಗತಿ ಎಂದು ಬೈಕ್ಗಳ ಶವಯಾತ್ರೆ ನಡೆಸಿದ್ದ ಸಿದ್ದರಾಮಯ್ಯನವರು ಕಾಣೆಯಾಗಿದ್ದಾರೆ, ಡಿಜಿಪಿಯವರೇ ಹುಡುಕಿಕೊಡಿ.
ಪೆಟ್ರೋಲ್, ಡೀಸೆಲ್ ಬೆಲೆ ಜಾಸ್ತಿಯಾದರೆ ತರಕಾರಿ ಮತ್ತಿತರ ದಿನಬಳಕೆ ವಸ್ತುಗಳ ಬೆಲೆ ಜಾಸ್ತಿ ಆಗುತ್ತದೆ ಎಂದು ಬೊಬ್ಬಿಡುತ್ತಿದ್ದ ಸಿದ್ದರಾಮಯ್ಯನವರು ಕಾಣೆಯಾಗಿದ್ದಾರೆ, ಹುಡುಕಿಕೊಡಿ.
ಪೆಟ್ರೋಲ್, ಡೀಸೆಲ್ ಬೆಲೆ ಜಾಸ್ತಿ ಮಾಡುವುದು ಬಡವರನ್ನು ಉಪವಾಸ ಬೀಳಿಸಿ ಸಾಯಿಸುವ ಫ್ಯಾಸಿಸ್ಟ್ ಮನಸ್ಸಿನ ಕ್ರೌರ್ಯ ಎನ್ನುತ್ತಿದ್ದ ಸಿದ್ದರಾಮಯ್ಯನವರು ಕಾಣೆಯಾಗಿದ್ದಾರೆ, ಹುಡುಕಿಕೊಡಿ.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಗ್ರಾಹಕರಿಗೆ 25 ರೂಪಾಯಿಗೆ ಪೆಟ್ರೋಲ್ ಹಾಕಿ ಪ್ರತಿಭಟನೆ ನಡೆಸಿದ್ದ ಸಿದ್ದರಾಮಯ್ಯನವರು ಕಾಣೆಯಾಗಿದ್ದಾರೆ, ಹುಡುಕಿಕೊಡಿ.
ಆಷಾಢಭೂತಿತನಕ್ಕೆ, ಬೂಟಾಟಿಕೆಗೆ ಯಾವುದಾದರೂ ನೋಬೆಲ್ ಅಥವಾ ಆಸ್ಕರ್ ಪ್ರಶಸ್ತಿ ಇದ್ದರೆ ಅದು ನಿಶ್ಚಿತವಾಗಿ ಡೋಂಗಿ ಸಿದ್ದರಾಮಯ್ಯನವರಿಗೇ ಸಲ್ಲಬೇಕು ಎಂದಿರುವ ಆರ್.ಅಶೋಕ್, ಸಂದೇಶದ ಅಡಿಯಲ್ಲಿ ‘ಬುರುಡೆ ರಾಮಯ್ಯ’, ‘ಕಾಂಗ್ರೆಸ್ ಲೂಟ್ಸ್ ಕರ್ನಾಟಕ’ ಎಂದು ಟ್ಯಾಗ್ ಮಾಡಿದ್ದಾರೆ
ಈ ಹಿಂದೆ ಟ್ಯಾಕ್ಸ್ ದರ ಪೆಟ್ರೋಲ್- 25.92% ಇದ್ದದ್ದು, ಈಗ 29.84% ಗೆ ಏರಿಕೆ (3.9% ಹೆಚ್ಚಳ)ಯಾಗಿದೆ. ಅಂತೆಯೇ ಡಿಸೇಲ್ ಈ ಹಿಂದೆ- 14.34% ಇದ್ದದ್ದು, ಈಗ 18.44%ಗೆ ಏರಿಕೆ ಅಂದರೆ 4.1% ರಷ್ಟು ಏರಿಕೆ ಕಂಡಂತೆ ಆಗಿದೆ.
ರಾಜ್ಯ ಸರ್ಕಾರದ ತೆರಿಗೆ ಹೆಚ್ಚಳದ ಪರಿಣಾಮ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳವಾಗಲಿದೆ. ಇದರೊಂದಿಗೆ, ಸುದೀರ್ಘ ಸಮಯದ ನಂತರ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ದುಬಾರಿಯಾಗುತ್ತಿದೆ.