
ಜೋಧ್ ಪುರ – ರಾಜಸ್ಥಾನದ ಜೋಧ್ಪುರದಲ್ಲಿ ಕೋಮುಗಲಭೆ ಭುಗಿಲೆದಿದ್ದು, ಕಲ್ಲು ತೂರಾಟದಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ…!
ಅಂಗಡಿಯೊಂದಕ್ಕೆ ಬೆಂಕಿ ಹಚ್ಚಲಾಗಿದ್ದು, ಎರಡು ವಾಹನಗಳಿಗೆ ಹಾನಿಯಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ…!!
ಸ್ಮಶಾನದ ಗೇಟ್ ನಿರ್ಮಾಣ ವಿಚಾರಕ್ಕೆ ಸಂಬಂಧಪಟ್ಟಂತೆ ಎರಡು ಕೋಮುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ರಾಜಸ್ಥಾನದ ಜೋಧ್ಪುರ ದಲ್ಲಿ ನಡೆದಿದೆ…!
ಜೋಧ್ ಪುರದ ಸೂರ್ ಸಾಗರ್ ಪ್ರದೇಶದಲ್ಲಿರುವ ರಾಜಗ್ರಾಮ್ ಸರ್ಕಲ್ ಸಮೀಪದಲ್ಲಿ ಈ ಘಟನೆ ನಡೆದಿದ್ದು, ಈದ್ಗಾ ಮಸೀದಿಯ ಹಿಂದೆ ನಿರ್ಮಾಣ ಹಂತದಲ್ಲಿರುವ ಗೋಡೆ ಮತ್ತು ಗೇಟ್ ವಿಚಾರವಾಗಿ ಹಿಂದೂ ಮತ್ತು ಮುಸ್ಲಿಂ ಸಮುದಾಯದ ನಡುವೆ ಭಾರೀ ಗಲಾಟೆ ನಡೆದಿತ್ತು…!!
ಒಂದು ಅಂಗಡಿ ಮತ್ತು ಟ್ರಾಕ್ಟರ್ಗೆ ಬೆಂಕಿ ಹಚ್ಚಲಾಗಿದೆ ಮತ್ತು ಜೀಪ್ ನ್ನು ಧ್ವಂಸಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ…!
ಪೊಲೀಸರು ಲಾಠಿ ಹಾಗೂ ನಾಲ್ಕೈದು ಸುತ್ತು ಅಶ್ರುವಾಯು ಸೆಲ್ ಸಿಡಿಸಿ ಜನರನ್ನು ಚದುರಿಸಿದ್ದಾರೆ…!!
ಶುಕ್ರವಾರ ತಡರಾತ್ರಿ ವೇಳೆಗೆ ಪರಿಸ್ಥಿತಿ ಹತೋಟಿಗೆ ಬಂದರೂ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು…!
ಇನ್ನು ಗಲಾಟೆ ಬಗ್ಗೆ ವರದಿಯಾಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದಾಗ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿತ್ತು…!!
ಎರಡೂ ದುಷ್ಕರ್ಮಿಗಳ ತಂಡ ಪರಸ್ಪರ ಕಲ್ಲು ತೂರಾಟ ನಡೆಸಿದ್ದರು…!
ಈ ವೇಳೆ ಅಂಗಡಿ, ಮನೆಗಳು ಸಂಪೂರ್ಣವಾಗಿ ಜಖಂಗೊಂಡಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ…!!
ಇನ್ನು ಪೊಲೀಸರು ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿದ್ದು, ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ…!
ಎರಡೂ ಕಡೆಗಳಿಂದ ದೂರು ದಾಖಲಾಗಿದ್ದು, ಎರಡು ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿದೆ…!!
ಘಟನೆಯಲ್ಲಿ ಪೊಲೀಸರು ಸೇರಿದಂತೆ ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ…!