
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಜಾರಿ ನಿರ್ದೇಶನಾಲಯ ಭರ್ಜರಿ ಬೇಟೆ ಆಡುತ್ತಿದೆ.
ಕಳೆದ ಎರಡು ದಿನದಿಂದ ಶೋಧ ಕಾರ್ಯ ನಡೆಸಿದ ಇ.ಡಿ ಅಧಿಕಾರಿಗಳು ಈಗ ನಾಗೇಂದ್ರ ಅವರನ್ನು ಅರೆಸ್ಟ್ ಮಾಡಿದ್ದಾರೆ. 94 ಕೋಟಿ ರುಪಾಯಿ ನಿಗಮದ ಹಣವನ್ನು ಅಕ್ರಮವಾಗಿ ಬಳಸಿಕೊಳ್ಳಲಾಗಿತ್ತು. ಹೀಗಾಗಿ ಇಡಿ ಏಕಕಾಲದಲ್ಲಿ ಕರ್ನಾಟಕ ಹಾಗೂ ಆಂಧ್ರಪ್ರದೇಶದಲ್ಲಿ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿತ್ತು. ಬಿ ನಾಗೇಂದ್ರ ಅವರ ಮೇಲೆ ಆಪ್ತನೋರ್ವನಿಂದ 25 ಲಕ್ಷ ಲಂಚ ಸ್ವೀಕರಿಸಿರುವ ಆರೋಪ ಇದೆ.
ಹಗರಣದಲ್ಲಿ ಪಂಪಣ್ಣ 50 ಲಕ್ಷ ರೂಪಾಯಿ ಕಮಿಷನ್ ಪಡೆದಿರುವ ಆರೋಪ ಕೇಳಿಬಂದಿತ್ತು. ಪಂಪಣ್ಣ ಹಗರಣ ಕುರಿತು ಬಾಯಿ ಬಿಟ್ಟಿದ್ದಾನೆ ಎನ್ನಲಾಗಿದೆ.
ಹಗರಣದಲ್ಲಿ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಖಾತೆಗೆ ಇತ್ತೀಚಿಗೆ ರಾಜೀನಾಮೆ ನೀಡಿದ್ದ ಮಾಜಿ ಬಿ. ನಾಗೇಂದ್ರ ಅವರನ್ನು ಬೆಳಂಬೆಳಿಗ್ಗೆ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗಾಗಿ ಶಾಂತಿನಗರದ ಕಚೇರಿಗೆ ಇಡಿ ಅಧಿಕಾರಿಗಳು ಕರೆದೊಯ್ದಿದ್ದಾರೆ.
ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ಎಸ್ಐಟಿ ತಂಡವನ್ನು ರಚನೆ ಮಾಡಿತ್ತು ಆದರೆ ತನಿಖೆ ಯಾವ ಹಂತದಲ್ಲಿ ನಡೆಯುತ್ತಿದೆ ಅನ್ನೋದು ಇದುವರೆಗೆ ತಿಳಿದುಬಂದಿಲ್ಲ.!
ವಾಲ್ಮೀಕಿ ನಿಗಮದ ಹಗರಣದಲ್ಲಿ 185 ಕೋಟಿ ರೂ. ಅವ್ಯವಹಾರ ನಡೆದಿತ್ತು. ಇದರ ವ್ಯಾಪ್ತಿ ಕೆಳಹಂತದ ಅಧಿಕಾರಿಗಳಿಂದ ಹಿಡಿದು ಮೇಲಿನವರೆಗೂ ವ್ಯಾಪಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿ ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ್ ಡೆತ್ನೋಟ್ನಲ್ಲಿಯೂ ಸಚಿವರ ಬಗ್ಗೆ ಉಲ್ಲೇಖ ಇದೆ.