
ನವದೆಹಲಿ – 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, INDI ಮೈತ್ರಿಕೂಟ ಭರ್ಜರಿ ಗೆಲುವು ದಾಖಲಿಸಿದೆ…!
ಲೋಕಸಭಾ ಚುನಾವಣೆಯ ಬಳಿಕ ನಡೆಯುತ್ತಿರುವ ಮೊದಲ ಉಪಚುನಾವಣೆ ಇದಾಗಿದ್ದು ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದೆ…!!
ಹಿಂದೂಗಳ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಬದರಿನಾಥ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ದಾಖಲಿಸಿದ್ದಾರೆ…!
ಇಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಲಖಪತ್ ಸಿಂಗ್ ಬುಟೋಲಾ ಅವರು ಭರ್ಜರಿ ಗೆಲುವು ದಾಖಲಿಸಿದ್ದಾರೆ…!!
ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿಜೆಪಿ ಅಭ್ಯರ್ಥಿ ವಿರುದ್ಧ 5 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದಾರೆ…!
ಈ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಶಿವಸೇನೆ (ಯುಬಿಟಿ) ರಾಜ್ಯಸಭಾ ಸಂಸದೆ ಪ್ರಿಯಾಂಕಾ ಚತುರ್ವೇದಿ, “ಜೈಬಾಬಾ ಬದರಿನಾಥ್”, ಜೈವಿಕೇತರ ಪಕ್ಷ ಇಲ್ಲೂ ಸೋತಿದೆ’ ಎಂದು ಬಿಜೆಪಿ ಕುರಿತು ವ್ಯಂಗ್ಯವಾಡಿದ್ದಾರೆ…!
ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬಿಜೆಪಿ ಸೋಲನ್ನು ಉದ್ದೇಶಿಸಿ ಪ್ರಿಯಾಂಕಾ ಚತುರ್ವೇದಿ ಈ ಪೋಸ್ಟ್ ಮಾಡಿದ್ದಾರೆ…!
13 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ 10ರಲ್ಲಿ ಇಂಡಿಯಾ ಮೈತ್ರಿಕೂಟ ಗೆದ್ದರೆ, ಎನ್ ಡಿ ಎ 2 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದೆ, ಬಿಹಾರದ ರೂಪೌಲಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿ ಶಂಕರ್ ಸಿಂಗ್, ಜೆಡಿಯು ಅಭ್ಯರ್ಥಿ ವಿರುದ್ಧ ಗೆಲುವು ದಾಖಲಿಸಿದ್ದಾರೆ…!!