
ಉಡುಪಿ – ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದಿದ್ದು, ಹಲವೆಡೆ ನೆರೆ ಪರಿಸ್ಥಿತಿ ನಿರ್ಮಾಣ ಆಗಿದೆ…!
ಜುಲೈ 16 ರಂದು ಉಡುಪಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಇರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ…!
ಉಡುಪಿ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ…!
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ…!
ಸಾರ್ವಜನಿಕರಿಗೆ ನಿತ್ಯ ಧ್ವನಿ ಮಾಡುವ ಕಳಕಳಿ
1) ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ, ಸಮುದ್ರ ತೀರಕ್ಕೆ ಸಾರ್ವಜನಿಕರು / ಪ್ರವಾಸಿಗರು ತೆರಳದಂತೆ ಮುನ್ನೆಚ್ಚರಿಕೆ ವಹಿಸುವುದು…!
2) ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿ ತೀರದ ಪ್ರದೇಶಗಳಿಗೆ, ವಿದ್ಯುತ್ ಕಂಬ / ತಂತಿ ಸಮೀಪ ಹೋಗದಂತೆ ಎಚ್ಚರ ವಹಿಸುವುದು ಅಗತ್ಯ…!
3) ಜಿಲ್ಲಾಡಳಿತದ ಸಲಹೆ ಸೂಚನೆಗಳನ್ನು ಪಾಲಿಸಿ…!