
ಉಡುಪಿ – ರಾಜ್ಯದಲ್ಲಿ ಕಳೆದ ಏಳೆಂಟು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ…!
ಅದರಲ್ಲೂ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು ಮಳೆ ಸಂಬಂಧಿತ ಅವಘಡಗಳು ಹೆಚ್ಚುತ್ತಿವೆ, ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ…!!
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಡಿಕೇರಿ, ಚಿಕ್ಕಮಂಗಳೂರು, ಹಾಸನ, ಶಿವಮೊಗ್ಗ, ಜಿಲ್ಲೆಗಳಲ್ಲಿ ಜುಲೈ 18 ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ…!
ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿನ್ನೆಲೆ
ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕು ಹಾಗೂ ಹೆಬ್ರಿ ತಾಲ್ಲೂಕು ಸೇರಿ ಕೆಲವು ತಾಲೂಕಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ
ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಆಯಾ ತಾಲೂಕಿನ ತಹಶೀಲ್ದಾರರಿಂದ ರಜೆ ಘೋಷಣೆ ಮಾಡಲು ಜಿಲ್ಲಾಡಳಿತ ಸೂಚನೆ ನೀಡಿದೆ
ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಗಳ ನಾಗರಿಕರಿಗೆ ಕೆಲವೊಂದು ಸೂಚನೆಗಳನ್ನು ಕೂಡ ಜಿಲ್ಲಾಡಳಿತಗಳು ನೀಡಿದೆ…!
ಉಡುಪಿ ಜಿಲ್ಲಾ ಆಡಳಿತದ ಸೂಚನೆ
1) ಜಿಲ್ಲಾ/ತಾಲೂಕು ಮಟ್ಟದ ಅಧಿಕಾರಿಗಳು/ನಿಯೋಜನೆಗೊಂಡ ನೋಡಲ್ ಅಧಿಕಾರಿಗಳು/ಸ್ಥಳೀಯ ಸಂಸ್ಥೆಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರು/ ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ವಿಪತ್ತನ್ನು ನಿಭಾಯಿಸುವುದು…!
2) ಪ್ರವಾಸಿಗರು/ಸಾರ್ವಜನಿಕರು/ಮೀನುಗಾರರು ನದಿ/ಜಲಪಾತ/ನೀರಿರುವ ಪ್ರದೇಶ/ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು…!!
3) ಈ ಸಂದರ್ಭದಲ್ಲಿ ಮಕ್ಕಳು/ಸಾರ್ವಜನಿಕರು ಅಪಾಯಕಾರಿ ವಿದ್ಯುತ್ಕಂಬದ ಹತ್ತಿರ ಸುಳಿಯಬಾರದು, ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರುವುದು. ದುರ್ಬಲವಾದ / ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ / ಮರಗಳ ಕೆಳಗೆ ನಿಲ್ಲಬಾರದು…!
4) ಸಾರ್ವಜನಿಕರು ತಗ್ಗು ಪ್ರದೇಶದಲ್ಲಿ ಅಥವಾ ಮಳೆಯಿಂದ ಅಪಾಯಕ್ಕೀಡಾಗುವ ಪ್ರದೇಶದಲ್ಲಿ ವಾಸವಿದ್ದಲ್ಲಿ ಅಥವಾ ಶೀತಲಾವಸ್ಥೆಯಿಂದ ಜಾರುವ ಹಂತದಲ್ಲಿರುವ ಕಂಪೌಂಡ್ ಅಥವಾ ಮನೆಯ ಗೋಡೆ, ಇಂತಹ ದುರ್ಬಲವಾದ ಕಟ್ಟಡದಲ್ಲಿ ವಾಸವಿರುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ವಾಸಿಸುವುದು, ಅಗತ್ಯವಿದ್ದಲ್ಲಿ ಈಗಾಗಲೇ ಸಂಬಂಧಿಸಿದ ತಹಶೀಲ್ದಾರರಿಂದ ಗುರುತಿಸಲ್ಪಟ ಕಾಳಜಿ ಕೇಂದ್ರದಲ್ಲಿ ಕಡ್ಡಾಯವಾಗಿ ಆಶ್ರಯ ಪಡೆದುಕೊಳ್ಳುವುದು…!!
5) ಸಾರ್ವಜನಿಕರಿಗೆ ಈ ಮೇಲಿನ ಅಂಶಗಳಂತೆ ಶೀತಲಾವಸ್ಥೆಯಿರುವ ಅಥವಾ ಕುಸಿತದ ಹಂತದ ಕಂಪೌಂಡ್ ಅಥವಾ ಮನೆಯ ಗೋಡೆ ಕಂಡುಬಂದಲ್ಲಿ ಈ ಕೆಳಗಿನ ದೂರವಾಣಿಗೆ ಮಾಹಿತಿ ನೀಡುವುದು…!
6) ಮೇಲಿನ ಅಂಶಗಳನ್ನು ಮಳೆಗಾಲದ ಎಲ್ಲಾ ಸಂದರ್ಭಗಳಲ್ಲಿ ಚಾಚುತಪ್ಪದೇ ಕಡ್ಡಾಯವಾಗಿ ಪಾಲಿಸುವುದು…!!