
ಕಾರವಾರ : ಕಳೆದ ಏಳೆಂಟು ದಿನಗಳಿಂದ ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಸಂಪೂರ್ಣವಾಗಿ ಜನಜೀವನ ಅರ್ಥವ್ಯಸ್ತಗೊಂಡಿದೆ ಉತ್ತರ ಕರ್ನಾಟಕ, ಮಲೆನಾಡು ಮತ್ತು ಕರಾವಳಿಯಲ್ಲಿ ಈ ಮಳೆ ಇನ್ನೂ 05 ದಿನ ಮುಂದುವರಿಯಲಿದೆ. ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಹೀಗಾಗಿ ಮುಂಜಾಗೃತ ಕ್ರಮವಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಲಾ, ಕಾಲೇಜಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.!
ಮಳೆ ಆರ್ಭಟಕ್ಕೆ ಉತ್ತರ ಕನ್ನಡ ಜಿಲ್ಲೆ ಸಂಪೂರ್ಣವಾಗಿ ನಲುಗಿ ಹೋಗಿದೆ ಅಪಾರ ಪ್ರಮಾಣದ ಹಾನಿಯಾಗಿದೆ.!
ಕಳೆದ ಏಳೆಂಟು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಉತ್ತರ ಕನ್ನಡ ಜಿಲ್ಲೆ ಜನರು ಆತಂಕದಲ್ಲಿ ದಿನದೊಡುವಂಥಾಗಿದೆ ಹತ್ತಾರು ಹಳ್ಳಿಗಳೇ ಜಲದಿಗ್ಬಂಧನಕ್ಕೆ ಸಿಲುಕಿವೆ.!
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ಕುಸಿದಿದ್ದ ಗುಡ್ಡ ತೆರವು ಕಾರ್ಯಾಚರಣೆ 4ನೇ ದಿನಕ್ಕೆ ಕಾಲಿಟ್ಟಿದೆ.. ಈವರೆಗೆ ಆರು ಜನರ ಶವ ಪತ್ತೆಯಾಗಿವೆ. ನಾಪತ್ತೆಯಾಗಿದ್ದ ಒಂದೇ ಕುಟುಂಬದ ಐವರಲ್ಲಿ ಮೂವರ ಶವ ಗಂಗಾವಳಿಯಲ್ಲಿ ಪತ್ತೆಯಾಗಿದ್ದು, ಇನ್ನುಳಿದ ಎರಡು ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರೆಸಲಾಗಿದೆ. ಒಂದೇ ಕುಟುಂಬದ ಲಕ್ಷ್ಮಣ, ವೀಣಾ ನಾಯಕ್, ಅವಂತಿಕಾ, ರೋಹನ್ ಸೇರಿದಂತೆ ಇಬ್ಬರು ಲಾರಿ ಚಾಲಕರ ಶವಗಳು ಪತ್ತೆಯಾಗಿವೆ.!
ಇನ್ನು ಗುಡ್ಡ ಕುಸಿತದಲ್ಲಿ 15ರಿಂದ 16 ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ. ಐಆರ್ಬಿ ಕಂಪನಿ (IRB Company) ಸಿಬ್ಬಂದಿ ನಾಪತ್ತೆಯಾದವರಿಗೆ ಶೋಧ ಕಾರ್ಯಾಚರಣೆ ಮಾಡ್ತಿದ್ದಾರೆ.!
ಈ ಮಧ್ಯೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕಾರವಾರ ತಾಲೂಕಿನಲ್ಲಿ ಆರು, ಕುಮಟಾ ತಾಲೂಕಿನಲ್ಲಿ 6, ಹೊನ್ನಾವರ ತಾಲೂಕಿನಲ್ಲಿ 14 ಸೇರಿದಂತೆ 26 ಚಿಕಿತ್ಸಾ ಕೇಂದ್ರಗಳನ್ನು ತೆರೆಯಲಾಗಿದ್ದು, 2,368 ಜನರಿಗೆ ಆಶ್ರಯ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.!
ಗೋಕರ್ಣ ಬಳಿಯ ರಾಮತೀರ್ಥ ದೇವಸ್ಥಾನದ ಹಿಂಬಾಗದ ಬಳಿ ಗುಡ್ಡ ಕುಸಿತ ಸಂಭವಿಸಿದೆ. ಬೆಳಗಿನ ಜಾವ ಗುಡ್ಡ ಕುಸಿದಿದ್ದರಿಂದ ಭಾರೀ ಅನಾಹುತ ಒಂದು ತಪ್ಪಿದೆ. ಅದೃಷ್ಟವಶಾತ್ ದೇವಸ್ಥಾನದಲ್ಲಿ ಯಾರೂ ಇಲ್ಲದ ಹಿನ್ನೆಲೆ ಅನಾಹುತ ತಪ್ಪಿದೆ.
ಇನ್ನು ಉಡುಪಿ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು ಜಿಲ್ಲೆಯ ಅನೇಕ ಕಡೆಗಳಲ್ಲಿ ಸೇತುವೆಗಳು ಹಾಗೂ ಕೃಷಿ ಭೂಮಿಗಳು ಮುಳುಗಡೆಯಾಗಿದೆ.!
ಬೈಂದೂರು ತಾಲೂಕಿನ ಪಡುವರಿ ಗ್ರಾಮದ ಸೋಮೇಶ್ವರ ಗುಡ್ಡ ನಿಧಾನವಾಗಿ ಜರಗುತಿದೆ ಯಾವುದೇ ಸಮಯದಲ್ಲಿಯೂ ಕುಸಿಯುವ ಸಾಧ್ಯತೆ ಇದೆ ಎನ್ನಲಾಗಿದೆ, ಅಕಸ್ಮಾತ್ ಗುಡ್ಡ ಕುಸಿದರೆ ಅಪಾರ ಪ್ರಮಾಣದಲ್ಲಿ ಹಾನಿಯಾಗುವ ಸಾಧ್ಯತೆಗಳು ಕೂಡ ಇದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.!
ಸ್ಥಳೀಯರು ಹಾಗೂ ಸಾರ್ವಜನಿಕರು ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ ವ್ಯಕ್ತಿ ಒಬ್ಬರು ರಸ್ತೆ ನಿರ್ಮಿಸಿದ ಕಾರಣದಿಂದ ಗುಡ್ಡ ಕುಸಿತ ಉಂಟಾಗುತ್ತಿದೆ ಜನಸಾಮಾನ್ಯರು ಒಂದು ಮನೆ ಕಟ್ಟಲು ಹೋದರೆ ನೂರಾರು ದಾಖಲೆಗಳನ್ನು ಕೇಳುತ್ತೀರಾ ಆದರೆ ಇಂಥವರಿಗೆ ಗುಡ್ಡ ಕೊರೆದು ರಸ್ತೆ ಮಾಡಲು ಅನುಮತಿ ಕೊಟ್ಟವರು ಯಾರು ಎಂದು ಸ್ಥಳೀಯರು ಹಾಗು ಜನಪ್ರತಿನಿಧಿಗಳು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ನಂತರ ಅಧಿಕಾರಿಗಳು ಬೈಂದೂರು ಹಾಗೂ ಸೋಮೇಶ್ವರ ದೊಂಬೆ ರಸ್ತೆಯನ್ನು ಬ್ಯಾರಿಗೆಟ್ ಹಾಕಿ ಬಂದ್ ಮಾಡಿದ್ದಾರೆ ಹಾಗೆ ಅಕ್ರಮವಾಗಿ ಗುಡ್ಡ ಕೊರೆದವರ ಮೇಲೆ ಪ್ರಕರಣ ದಾಖಲಿಸಿದಾಗ ಹೇಳಿದ್ದಾರೆ.
ಇನ್ನು ಬೈಂದೂರು ತಾಲೂಕಿನ ಕೆಲವೆಡೆ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು ಕೃಷಿ ಭೂಮಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ ಹಾಗೆ ತಗ್ಗು ಪ್ರದೇಶಗಳಿಗೂ ನೆರೆ ನೀರು ನುಗ್ಗುವ ಭೀತಿಯಲ್ಲಿ ಜನರಿದ್ದಾರೆ.
ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲೂ ಮಳೆಯ ಅಬ್ಬರ ಜೋರಾಗಿದೆ. ಶೃಂಗೇರಿ ದೇವಸ್ಥಾನಕ್ಕೆ ಹೋಗುವ ರಸ್ತೆಗಳು ಜಲಾವೃತವಾಗಿದ್ದು, ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಲು ಸಾಧ್ಯವಾಗುತ್ತಿಲ್ಲ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾವಿನೂರು, ಕಾಗಿನೆರೆ ಸೇರಿದಂತೆ ಹಲವು ಗ್ರಾಮಗಳಲ್ಲಿ ಮಳೆಯಿಂದಾಗಿ ಇಂದಿಗೂ ವಿದ್ಯುತ್ ಇಲ್ಲದಂತಾಗಿದೆ. ಈ ಭಾಗದಲ್ಲಿ ಕೆಸರು ಹೆಚ್ಚಾಗಿ ಆಗುತ್ತಿದ್ದು, ಸಕಲೇಶಪುರ-ಮಾರನಹಳ್ಳಿ ನಡುವಿನ ರಾಷ್ಟ್ರೀಯ ಹೆದ್ದಾರಿ 75ಕ್ಕೆ ಹೆಚ್ಚು ಹಾನಿಯಾಗುತ್ತಿದೆ ಎಂದು ಸಕಲೇಶಪುರ ಉಪ ವಿಭಾಗಾಧಿಕಾರಿ ಶ್ರುತಿ ತಿಳಿಸಿದ್ದಾರೆ.
ರೆಡ್ ಅಲರ್ಟ್ ಘೋಷಿಸಿದ ಜಿಲ್ಲೆಗಳ ವಿವರ
ಕರಾವಳಿಯಲ್ಲಿ ಇಂದು ಮತ್ತು ನಾಳೆ ಶುಕ್ರವಾರ 2 ದಿನ ”ಉಡುಪಿ,ಉತ್ತರ ಕನ್ನಡ ಹಾಗೂ ದಕ್ಷಿಣ ಜಿಲ್ಲೆಗಳು ಹಾಗೂ ಮಲೆನಾಡಿನ ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ” ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಕೊಡಲಾಗಿದೆ. ನಂತರದ ಮೂರು ದಿನ (ಜುಲೈ 22ರವರೆಗೆ) ಇದೇ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್ ನೀಡಲಾಗಿದೆ.