
ಉಡುಪಿ – ಜಿಲ್ಲೆಯ ಬಹುದಿನಗಳ ಬೇಡಿಕೆಯಾಗಿರುವ ಸರ್ಕಾರಿ ಮೆಡಿಕಲ್ ಕಾಲೇಜು ಕೇವಲ ಚುನಾವಣೆ ಆಶ್ವಾಸನೆಗಷ್ಟೇ ಸೀಮಿತಗೊಂಡಂತಿದೆ…!
ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಬೇಕು ಎಂಬ ಕೂಗು ಉಡುಪಿಯಲ್ಲಿ ಬಲಗೊಳ್ಳುತ್ತಿದೆ…!!
ಸಮಾಜಪರ ಚಿಂತಕರು, ವೈದ್ಯರು, ವಿದ್ಯಾರ್ಥಿಗಳು, ಮೆಡಿಕಲ್ ಕಾಲೇಜು ಆರಂಭ ಆಗಬೇಕು ಎಂದು ಅಭಿಯಾನ ಪ್ರಾರಂಭಿಸಿ ವರ್ಷಗಳೇ ಕಳೆದಿವೆ…!
ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದ ಚುನಾವಣೆ ಹೊತ್ತಿನಲ್ಲಿ ಮಾತ್ರ ಭರವಸೆ ನೀಡುತ್ತಿರುವುದು ಈ ಭಾಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ…!!
ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಆರಂಭಗೊಂಡರೆ ಜಿಲ್ಲೆಯ ಪ್ರತಿಭಾವಂತ ಬಡ ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದರೆ ಇಲ್ಲಿಯೇ ಸರಕಾರಿ ಸೀಟ್ ಕೂಡ ಪಡೆಯಬಹುದು…!
ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ ಶುಲ್ಕ ವಾರ್ಷಿಕ 60 ಸಾವಿರದಿಂದ 70 ಸಾವಿರ ರೂಪಾಯಿ ಇದ್ದರೆ ಖಾಸಗಿ ಕಾಲೇಜಿನಲ್ಲಿ ಸರಕಾರಿ ಸೀಟಿಗೆ 1.50 ಲಕ್ಷ ರೂಪಾಯಿ ಇದೆ…!!
ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ದುಬಾರಿ ಶುಲ್ಕ ಇರುವುದರಿಂದ ಜಿಲ್ಲೆಯ ಹಲವಾರು ಮಂದಿ ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣದಿಂದಲೇ ವಂಚಿತರಾಗುತ್ತಿದ್ದಾರೆ…!
ಉಡುಪಿ, ಜಿಲ್ಲೆಯಾಗಿ ವರ್ಷಗಳೇ ಉರುಳಿದರೂ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು ಇಲ್ಲದಿರುವುದು ದುರಂತವೇ ಸರಿ…!
ನಮ್ಮ ಜಿಲ್ಲೆ ಸ್ಥಾಪನೆಯಾದ ಸಂದರ್ಭದಲ್ಲಿಯೇ ರಚಿತವಾದ ಜಿಲ್ಲೆಗಳಲ್ಲಿ ಕೊಪ್ಪಳ ಕೂಡ ಒಂದು…!!
ಕೊಪ್ಪಳದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜನ್ನು ನಿರ್ಮಿಸಲಾಗಿದೆ…!
ಆದರೆ ಉಡುಪಿ ಜಿಲ್ಲೆಗೆ ಈ ಭಾಗ್ಯ ಲಭ್ಯವಾಗಿಲ್ಲದಿರುವುದು ಈ ಭಾಗದ ಜನಪ್ರತಿನಿಧಿಗಳ ಅಸಮರ್ಥತೆಯನ್ನು ಎದ್ದು ತೋರಿಸುತ್ತಿದೆ…!!