
ಬೆಂಗಳೂರು – ಕೆಲವು ದಿನಗಳ ಹಿಂದೆ ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ನಾಯಿ ಮಾಂಸ ಸಾಗಾಟವಾಗುತ್ತಿದೆ ಎಂಬ ಸುದ್ದಿ ಬಿರುಗಾಳಿಯಂತೆ ಹರಿದಾಡಿತ್ತು…!
ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಪುನೀತ್ ಕೆರೆಹಳ್ಳಿ ನೇತೃತ್ವದಲ್ಲಿ ಮಾಂಸದ ಬಾಕ್ಸ್ ಗಳು ರೈಲಿನಿಂದ ಕೆಳಕ್ಕೆ ಇಳಿಯುತಿದ್ದಂತೆಯೇ ದಾಳಿ ನಡೆಸಿ ಇದು ನಾಯಿ ಮಾಂಸ, ಕುರಿ ಮಾಂಸ ಅಲ್ಲ ಎಂದು ಆರೋಪಿಸಿದ್ದರು…!!
ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಆದಾಗ ಪೋಲಿಸರ ಸಹಕಾರದೊಂದಿಗೆ ಆಹಾರ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ರೈಲು ತಪಾಸಣೆ ವೇಳೆ ಸಿಕ್ಕ ಮಾಂಸವನ್ನು ಪರೀಕ್ಷೆಗೆ ಲ್ಯಾಬ್ ಗೆ ಕಳುಹಿಸಲಾಗಿತ್ತು…!
ಸದ್ಯ ಲ್ಯಾಬ್ ರಿಪೋರ್ಟ್ ಹೊರಬಂದಿದೆ…!!
ಇತ್ತೀಚೆಗೆ ರಾಜಸ್ಥಾನದಿಂದ ಸರಬರಾಜು ಆಗುತ್ತಿದ್ದ, ರೈಲಿನಲ್ಲಿ ಬಂದಿದ್ದ ಮಾಂಸದ ಮಾದರಿಗಳನ್ನು ಸಂಗ್ರಹಿಸಿ ಲ್ಯಾಬ್ ಗೆ ಕಳುಹಿಸಲಾಗಿತ್ತು…!!
ಇದೀಗ ಲ್ಯಾಬ್ ರಿಪೋರ್ಟ್ ಬಂದಿದ್ದು ರಾಜಸ್ಥಾನದಿಂದ ಬೆಂಗಳೂರಿಗೆ ರೈಲಿನಲ್ಲಿ ಬಂದಿದ್ದ ಮಾಂಸದ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಗಳಿಗೆ ಪರೀಕ್ಷಾರ್ಥವಾಗಿ ಕಳುಹಿಸಲಾಗಿತ್ತು…!
ಇದೀಗ ಲ್ಯಾಬ್ ರಿಪೋರ್ಟ್ ಬಂದಿದ್ದು, ರಾಜಸ್ಥಾನದಿಂದ ಬೆಂಗಳೂರಿಗೆ ಬಂದ ಮಾಂಸವು ‘ಕುರಿ’ಯದ್ದೇ ಆಗಿದೆ ಎಂಬುದನ್ನು ಪ್ರಯೋಗಾಲಯವು ಖಚಿತಪಡಿಸಿದೆ…!!
ಈ ಹಿನ್ನೆಲೆಯಲ್ಲಿ ಯಾವುದೇ ಅನಗತ್ಯ ಗೊಂದಲ ಸೃಷ್ಟಿಸದಂತೆ ಮತ್ತು ಈ ಕುರಿತ ಗಾಳಿ ಸುದ್ದಿಗಳಿಗೆ ಕಿವಿಗೊಡದಂತೆ ನಾನು ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಸಚಿವ ದಿನೇಶ್ ಗುಂಡೂರಾವ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ…!