
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರಿಗೆ ತಲೆ ನೋವಾದ ಮುಡಾ ಹಗರಣ ರಾಜ್ಯ ರಾಜಕೀಯದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಹಾಗೂ ಮುಡಾ ಹಗರಣ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಅನುಮತಿ ಕೋರಿ ವಕೀಲ ಟಿಜೆ ಅಬ್ರಹಾಂ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋತ್ ನೋಟಿಸ್ ನೀಡಿದ್ದು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಕೇಳಿದ ಕಾರಣ
ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.
ಈಗಾಗಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಂದ ರಾಜ್ಯಪಾಲರು ನಿರಂತರ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಈಗಾಗಲೇ ಒಂದು ಬಾರಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವರದಿ ನೀಡಿದ್ದಾರೆ. ಅಧಿವೇಶನದ ಸಂದರ್ಭದಲ್ಲಿ ಸರ್ಕಾರದ ಚೀಫ್ ಸೆಕ್ರೆಟರಿ ಮಾಹಿತಿ ಹಂಚಿಕೊಂಡಿದ್ದರು. ಇದೀಗ ಮತ್ತೆ ಖಾಸಗಿ ದೂರಿನ ಅನ್ವಯ ರಾಜ್ಯಪಾಲರು ವರದಿ ಕೇಳಿದ್ದಾರೆ.
ಎರಡು ದಿನಗಳ ದೆಹಲಿ ಪ್ರವಾಸ ತೆರಳಿದ್ದ ಮುಖ್ಯಮಂತ್ರಿ, ನಗರಕ್ಕೆ ಬುಧವಾರ ಸಂಜೆ ವಾಪಸಾಗಿದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಿರುವ ಮುಖ್ಯಮಂತ್ರಿ, ಮುಡಾ ವಿಚಾರವೂ ಸೇರಿದಂತೆ ರಾಜ್ಯ ರಾಜಕೀಯದಲ್ಲಿನ ಸದ್ಯದ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದ್ದರು ಇನ್ನು ಇಂದು ಸಚಿವ ಸಂಪುಟದ ಸಭೆಯ ನಂತರ ಸರಕಾರದ ಮುಂದಿನ ನಡೆ ಏನು ಅನ್ನೋದು ತಿಳಿಯಬೇಕಾಗಿದೆ.
ರಾಜ್ಯಪಾಲರು ಬಿಜೆಪಿ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ: ದಿನೇಶ್ ಗುಂಡೂರಾವ್.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬಿಜೆಪಿಯ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಬುಧವಾರ ಆರೋಪಿಸಿದರು,
ರಾಜ್ಯಪಾಲರ ಮೂಲಕ ಸರ್ಕಾರ ಉರುಳಿಸಲು ಯತ್ನ: ಕೃಷ್ಣ ಬೈರೇಗೌಡ
‘ಪ್ರತಿಪಕ್ಷಗಳು ರಾಜ್ಯಪಾಲರ ಕಚೇರಿ ದುರುಪಯೋಗ ಪಡಿಸಿಕೊಂಡು ರಾಜ್ಯ ಸರ್ಕಾರವನ್ನು ಬುಡಮೇಲು ಮಾಡಲು ಯತ್ನಿಸಿದರೆ, ನಾವು ಸುಪ್ರೀಂ ಕೋರ್ಟ್ನಲ್ಲಿ ಹೋರಾಟ ನಡೆಸಲಿದ್ದೇವೆ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ ನೀಡಿದರು.