
ಭಾರತವನ್ನು ಸುಮಾರು ಆರು ದಶಕಗಳ ಕಾಲ ಆಳಿರುವ ಕಾಂಗ್ರೆಸ್ ಪಕ್ಷ ಇದೇ ಮೊದಲ ಬಾರಿಗೆ ಕಡಿಮೆ ಅಭ್ಯರ್ಥಿಗಳನ್ನು ಚುನಾವಣಾ ಕಣಕ್ಕೆ ಇಳಿಸಿದೆ…!
ದೇಶವನ್ನು ಅತ್ಯಧಿಕ ಕಾಲ ಆಳಿದ್ದ ಕಾಂಗ್ರೆಸ್ ಈಗ ಮೋದಿ ಅಲೆಯ ಎದುರು ಕುಸಿದು ಹೋಗಿದೆಯೇ.? ಹಿಂದೆಂದೂ ಇಲ್ಲದ ರೀತಿಯಲ್ಲಿ ಈ ಬಾರಿಯ ಚುನಾವಣೆಯಲ್ಲಿ ಅತ್ಯಂತ ಕಡಿಮೆ ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಸ್ಪರ್ಧೆ ಮಾಡುತ್ತಿದ್ದಾರೆ…!!
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 300ಕ್ಕಿಂತಲೂ ಕಡಿಮೆ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ, ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ ಬಳಿಕ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಇಂಥಹ ಸ್ಥಿತಿ ಎದುರಿಸುತ್ತಿದೆ. ಈ ಬಗ್ಗೆ ಆಂಗ್ಲ ದೈನಿಕವೊಂದು ವರದಿ ಪ್ರಕಟಿಸಿದೆ…!
27 ರಾಜ್ಯಗಳು ಮತ್ತು 8 ಕೇಂದ್ರಾಡಳಿತ ಪ್ರದೇಶಗಳಲ್ಲಿರುವ 543 ಕ್ಷೇತ್ರಗಳ ಪೈಕಿ ಇದುವರೆಗೆ 270 ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳನ್ನು ಕಾಂಗ್ರೆಸ್ ಪ್ರಕಟಿಸಿದೆ…!!