
ಜಾಮೀನು ರದ್ದು ಗೊಳಿಸಿ ಆದೇಶ ಹೊರಡಿಸಿದ ಸುಪ್ರೀಂ ಕೋರ್ಟ್…!!
ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಮುರುಘಾ ಶ್ರೀಗಳಿಗೆ ಹೈಕೋರ್ಟ್ ಜಾಮೀನು ನೀಡಿತ್ತು, ಆದರೆ ಸುಪ್ರೀಂ ಕೋರ್ಟ್ ಇಂದು ಅದನ್ನು ರದ್ದುಗೊಳಿಸಿ ವಿಚಾರಣಾ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚಿಸಿದೆ…!
ಹೀಗಾಗಿ ಒಂದೂವರೆ ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದ ಮುರುಘಾ ಮಠದ ಶ್ರೀಗಳಿಗೆ ಮತ್ತೆ ಬಂಧನದ ಭೀತಿ ಎದುರಾಗಿದೆ…!!
ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ ಶಿವಮೂರ್ತಿ ಶರಣರಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಇಂದು ರದ್ದು ಮಾಡಿದೆ. ಈ ಮೂಲಕ ಮತ್ತೆ ಸ್ವಾಮೀಜಿ ಜೈಲು ಸೇರಲಿದ್ದಾರೆ…!
ಕೆಲ ತಿಂಗಳುಗಳ ಹಿಂದೆ ಕರ್ನಾಟಕ ಹೈಕೋರ್ಟ್, ಮುರುಘಾ ಶ್ರೀಗಳಿಗೆ ಷರತ್ತುಬದ್ಧ ಜಾಮೀಜು ನೀಡಿತ್ತು. ಆದರೆ ಆರೋಪಿ ಬಂಧನದಿಂದ ಹೊರಗಿದ್ದು, ಸಾಕ್ಷಗಳನ್ನು ನಾಶಪಡಿಸಬಹುದು ಎಂದು ಮಾಜಿ ಸಚಿವ ಎಚ್ ಏಕಾಂತಯ್ಯ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು…!!
ಶ್ರೀಗಳ ಜಾಮೀನು ರದ್ದು ಕೋರಿ ಏಕಾಂತಯ್ಯ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಜಾಮೀನು ರದ್ದುಗೊಳಿಸಿ, ನಾಲ್ಕು ತಿಂಗಳ ಕಾಲ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ…!
4 ತಿಂಗಳ ಒಳಗಡೆ ವಿಚಾರಣೆಯನ್ನು ಪೂರ್ಣಗೊಳಿಸುವಂತೆ ಸೂಚಿಸಿರುವ ಸುಪ್ರೀಂ ಕೋರ್ಟ್, ಒಂದು ವೇಳೆ ವಿಚಾರಣೆ ಪೂರ್ಣ ಆಗದೇ ಇದ್ದಲ್ಲಿ, ನ್ಯಾಯಾಂಗ ಬಂಧನದ ಅವಧಿಯನ್ನು ಇನ್ನೆರಡು ತಿಂಗಳ ಕಾಲ ವಿಸ್ತರಣೆ ಮಾಡಬಹುದು ಎಂದು ಹೇಳಿದೆ…!!
ಸುಪ್ರೀಂ ಕೋರ್ಟ್ ಆದೇಶದಂತೆ, ಮುರುಘಾ ಶ್ರೀಗಳು ಒಂದು ವಾರದೊಳಗೆ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಬೇಕಿದೆ…!
ಪ್ರಕರಣದ ಹಿನ್ನೆಲೆ
2022 ಆಗಸ್ಟ್ 31 ರಂದು ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮುರುಘಾ ಶ್ರೀಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಸೆಪ್ಟೆಂಬರ್ 1ರಂದು ಶ್ರೀಗಳ ಬಂಧನವಾಗಿತ್ತು. ಸುಮಾರು 14 ತಿಂಗಳ ಕಾಲ ಜೈಲಿನಲ್ಲಿದ್ದ, ಶ್ರೀಗಳು 2023 ನವೆಂಬರ್ 16ರಂದು ಷರತ್ತು ಬದ್ಧ ಜಾಮೀನಿನ ಮೇಲೆ ಹೊರಗೆ ಬಂದಿದ್ದರು…!