
ಮಂಡ್ಯ: ಬೆಳ್ಳೂರಿನಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣ; ದೂರು ಸ್ವೀಕರಿಸಲು ನಿರ್ಲಕ್ಷ್ಯ ತೋರಿದ್ದ PSI ಅಮಾನತು
ಶುಕ್ರವಾರ ಬೆಳ್ಳೂರಿನ ಸಂತೆ ಬೀದಿಯಲ್ಲಿ ಮುಸ್ಲಿಂ ಯುವಕರು ಅತಿ ವೇಗವಾಗಿ ಕಾರು ಚಲಾಯಿಸುತ್ತಿದ್ದರು ವೇಗವಾಗಿ ಕಾರು ಚಲಾಯಿಸಬೇಡಿ ಅಭಿಲಾಶ್ ಹಾಗೂ ನಾಗೇಶ್ ಬುದ್ಧಿಮಾತು ಹೇಳುತ್ತಾರೆ ಇದೇ ವಿಷಯಕ್ಕೆ ವಾದಗಳು ಕೂಡ ನಡೆಯುತ್ತದೆ.
ಅಭಿಲಾಷ ಹಾಗೂ ನಾಗೇಶ್ ವಿರುದ್ಧ ಸಿಟ್ಟಿಗೆದ್ದು ಮುಸ್ಲಿಂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಂ ಯುವಕರ ಗುಂಪನ್ನು ಕರೆದುಕೊಂಡು ಬಂದು ಅಭಿಲಾಷ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುತ್ತಾರೆ ಇದನ್ನು ತಡೆಯಲು ಬಂದ ಹಿಂದೂ ಯುವಕರ ಮೇಲೆಯೂ ಗುಂಪು ಹಲ್ಲೆ ಮಾಡಿದೆ.
ಅಷ್ಟೇ ಅಲ್ಲದೆ ಹಿಂದುಗಳ ಮನೆಗಳಿಗೆ ನುಗ್ಗಿ ಮಹಿಳೆಯರಿಗೆ ಬೆದರಿಕೆ ಹಾಕಿದ್ದಾರೆ ಎನ್ನುವ ಆರೋಪ ಕೂಡ ಕೇಳಿ ಬರುತ್ತಿದೆ
ಈ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ ನಡೆದಿದೆ.
ಹಲ್ಲೆಗೊಳಗಾದವರು ಪ್ರಕರಣದ ದಾಖಲಿಸಲು ಠಾಣೆಗೆ ಬಂದಾಗ ಪ್ರಕರಣವನ್ನು ದಾಖಲಿಸಿಕೊಳ್ಳಲು ಪಿಎಸ್ಐ ನಿರ್ಲಕ್ಷ್ಯ ತೋರಿಸುತ್ತಾರೆ.
ಗ್ರಾಮಸ್ಥರು ಪೊಲೀಸ್ ಠಾಣೆ ಎದುರು ಪ್ರತಿಭಟನೆಯನ್ನು ನಡೆಸುತ್ತಾರೆ ಪ್ರಕರಣದ ಗಂಭೀರತೆ ಅರಿತ ಪೊಲೀಸ್ ಇಲಾಖೆ
ಬೆಳ್ಳೂರು ಠಾಣೆಯ ಬಸವರಾಜ ಚಿಂಚೋಳಿ ಪಿಎಸ್ಐ ಅವರನ್ನು . ಕರ್ತವ್ಯಲೋಪ ಕಾರಣ ನೀಡಿ ಮಂಡ್ಯ ಎಸ್ಪಿ ಎನ್.ಯತೀಶ್ ಅಮಾನತು ಆದೇಶ ಹೊರಡಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಪ್ರತ್ಯೇಕ 3 ದೂರಗಳು ದಾಖಲಾಗಿವೆ ಇನ್ನು ಘಟನೆ ಬಳಿಕ ದೂರು ಸ್ವೀಕರಿಸದ ಪೊಲೀಸರ ವಿರುದ್ಧವೂ ಕಂಪ್ಲೇಂಟ್ ದಾಖಲಿಸಿದ್ದಾರೆ. ಅಭಿಲಾಷ್ ಮೇಲೆ ಹಲ್ಲೆ, ರಶ್ಮಿ ಮನೆಗೆ ನುಗ್ಗಿ ದಾಂಧಲೆ ಹಾಗೂ ಮಂಜುಳಾಗೆ ರಸ್ತೆಯಲ್ಲಿ ಬೆದರಿಕೆ ಹಾಕಿದ ಬಗ್ಗೆಯೂ ಪ್ರತ್ಯೇಕ ದೂರು ನೀಡಿದ್ದು, ಮೊಹ್ಮದ್ ಹುಜೈಫ್, ಇಮ್ರಾನ್, ಸಮೀರ್ ಸೂಫಿಯಾನ್ ಮತ್ತು ಇರ್ಫಾನ್ ಸೇರಿದಂತೆ ಹಲವರ ವಿರುದ್ಧ ದೂರು ದಾಖಲಾಗಿದೆ.
ಪೊಲೀಸರು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ