
ಕೊಪ್ಪಳ ತಾಲೂಕಿನ ಯಲಮಗೇರಿ ಗ್ರಾಮದಲ್ಲಿ ಶನಿವಾರ ರಾತ್ರಿ ಕಾಂಗ್ರೆಸ್ಗೆ ಮತ ಹಾಕಲ್ಲ, ನಾವು ಬಿಜೆಪಿಗೆ ಮತ ಹಾಕುತ್ತೇವೆ ಎಂದಿದ್ದಕ್ಕೆ ವ್ಯಕ್ತಿಯೋರ್ವನ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ…!
ಎಂಟಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರಿಂದ ದ್ಯಾಮಣ್ಣ ಮತ್ತು ಅವರ ಕುಟುಂಬದವರ ಮೇಲೆ ಹಲ್ಲೆ ಮಾಡಲಾಗಿದೆ…!!
ಕಾಂಗ್ರೆಸ್ ಕಾರ್ಯಕರ್ತರಾದ ಗವಿಸಿದ್ದ, ಬಾಳಪ್ಪ, ನೀಲಪ್ಪ, ಗಂಗಣ್ಣ ಎಂಬುವವರು ದ್ಯಾಮಣ್ಣನಿಗೆ ಹಲ್ಲೆ ನಡೆಸಿದ್ದಾರೆ…!
ಶನಿವಾರ ರಾತ್ರಿ ದ್ಯಾಮಣ್ಣ ಮನೆಗೆ ಕಾಂಗ್ರೆಸ್ ಮುಖಂಡರು ಬಂದಿದ್ದಾರೆ. ಈ ವೇಳೆ ದ್ಯಾಮಣ್ಣ ಕಾಂಗ್ರೆಸ್ಗೆ ಮತ ಹಾಕುವುದಿಲ್ಲ, ಬಿಜೆಪಿ ಪಕ್ಷಕ್ಕೆ ಮತ ಹಾಕುತ್ತೇವೆ ಎಂದಿದ್ದಾರೆ…!!
ಇದರಿಂದ ಸಿಟ್ಟಾದ ಕೈ ಕಾರ್ಯಕರ್ತರು, ಕಾಂಗ್ರೆಸ್ಗೆ ಯಾಕೆ ಮತ ಹಾಕುವುದಿಲ್ಲ ಎಂದು ದ್ಯಾಮಣ್ಣನ ಮೇಲೆ ಎರಗಿದ್ದಾರೆ. ಬಳಿಕ ದ್ಯಾಮಣ್ಣನನ್ನು ರಸ್ತೆಗೆಳೆದು ತಂದು ಕಟ್ಟಿಗೆಯಿಂದ ಹಲ್ಲೆ ಮಾಡಿದ್ದಾರೆ. ದ್ಯಾಮಣ್ಣನ ಕೈ-ಕಾಲು ಮುರಿದಿದ್ದಾರೆ. ಗಾಯಾಳನ್ನು ದ್ಯಾಮಣ್ಣನನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಿಲ್ಲಾಸ್ಪತ್ರೆಗೆ ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣವರ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು…!
ಘಟನೆ ಸಂಬಂಧ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…!!