
ಲೋಕಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆ ಜೋರಾಗಿದೆ. ಇದರ ನಡುವೆ ಚುನಾವಣಾ ಪೂರ್ವ ಸಮೀಕ್ಷೆಗಳ ವರದಿಗಳು ಸಹ ಬಿಡುಗಡೆಯಾಗುತ್ತಿವೆ. ಸದ್ಯ ಎಬಿಪಿ – ಸಿ – ವೋಟರ್ ಐದು ರಾಜ್ಯಗಳ ಸಮೀಕ್ಷೆಯ ಫಲಿತಾಂಶ ಬಿಡುಗಡೆ ಮಾಡಿದೆ…!
ಎಬಿಪಿ ಸಮೀಕ್ಷೆ ಪ್ರಕಾರ ರಾಜಸ್ಥಾನ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ ಹಾಗೂ ಕರ್ನಾಟಕದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಿಗಲಿದೆ ಎಂದು ಅಭಿಪ್ರಾಯ ಪಟ್ಟಿದೆ…!!
ರಾಜಸ್ಥಾನದಲ್ಲಿ ಬಿಜೆಪಿಗೆ ಎಲ್ಲಾ 25 ಸ್ಥಾನಗಳು ದೊರೆಯಲಿದ್ದು ಕಾಂಗ್ರೆಸ್ ಶೂನ್ಯ ಸಂಪಾದನೆ ಮಾಡಲಿದೆ. ಅದರಂತೆ ಕರ್ನಾಟಕದಲ್ಲಿ 28 ಕ್ಷೇತ್ರಗಳ ಪೈಕಿ ಬಿಜೆಪಿಗೆ 23, ಕಾಂಗ್ರೆಸ್ಗೆ 5 ಸ್ಥಾನ ಸಿಗಲಿವೆ. ಇನ್ನು ದೀದಿ ನಾಡು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಹಾಗೂ ಟಿಎಂಸಿ ಸರಿಸಮಾನದ ಗೆಲುವು ಪಡೆಯಲಿದೆ. ಬಿಜೆಪಿ ಹಾಗೂ ಟಿಎಂಸಿ ತಲಾ 20 ಸ್ಥಾನಗಳನ್ನು ಪಡೆಯಲಿದೆ. ಇಲ್ಲಿ ಕಾಂಗ್ರೆಸ್ ಕೇವಲ 2 ಸ್ಥಾನಗಳಲ್ಲಿ ಮಾತ್ರ ಜಯ ಸಾಧಿಸಲು ಸಾಧ್ಯ. ಪಂಜಾಬಿನಲ್ಲಿ ಬಿಜೆಪಿ 2, ಕಾಂಗ್ರೆಸ್ 7 ಹಾಗೂ ಎಎಪಿ 4 ಸ್ಥಾನಗಳನ್ನು ಪಡೆಯಬಹುದು ಎಂದು ಸಮೀಕ್ಷೆ ಹೇಳಿದೆ…!
ಮಧ್ಯಪ್ರದೇಶದಲ್ಲಿ ಬಿಜೆಪಿ 29 ಸ್ಥಾನಗಳ ಪೈಕಿ 28 ರಲ್ಲಿ ಗೆಲುವು ಸಾಧಿಸಬಹುದು, ಕಾಂಗ್ರೆಸ್ ಒಂದು ಸ್ಥಾನಕ್ಕೆ ತ್ರಪ್ತಿ ಪಡಬೇಕಾಗುತ್ತದೆ ಎಂದು ಸಿ ವೋಟರ್ ಸಮೀಕ್ಷೆ ಭವಿಷ್ಯ ನುಡಿದಿದೆ…!!