
ಮೈಸೂರು : ಲೋಕಸಭಾ ಚುನಾವಣೆಗೂ ಮುನ್ನ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿತ್ತು 28 ಲೋಕಸಭಾ ಕ್ಷೇತ್ರದಲ್ಲಿ ಮೂರು ಸ್ಥಾನಗಳನ್ನು ಬಿಜೆಪಿ ಜೆಡಿಎಸ್ ಗೆ ಬಿಟ್ಟುಕೊಟ್ಟು ಇನ್ನುಳಿದ 26 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸಿತ್ತು .
ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರಿಯುತ್ತೆ. ಮೈತ್ರಿಗೆ ಯಾವ ಸಮಸ್ಯೆಯೂ ಆಗುವುದಿಲ್ಲ ವಿಧಾನ ಪರಿಷತ್ ಚುನಾವಣೆಯಲ್ಲಿಯೂ ಮೈತ್ರಿ ಮುಂದುವರಿಯುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ 400ಕ್ಕೂ ಹೆಚ್ಚು ಸ್ಥಾನ ಗೆದ್ದು ಶ್ರೀ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ. ಸೂರ್ಯ, ಚಂದ್ರ ಇರೋದು ಎಷ್ಟು ಸತ್ಯವೋ ಮೋದಿ ಮತ್ತೊಮ್ಮೆ ಪ್ರಧಾನಿಯಾಗೋದು ಕೂಡ ಅಷ್ಟೆ ಸತ್ಯ. ಮುಂದೆ ಪ್ರಧಾನಿಯಾಗಿ ಏನು ಕೆಲಸ ಮಾಡಬೇಕು ಎಂಬುದನ್ನು ಮೋದಿಯವರು ಈಗಲೇ ಯೋಚಿಸಿದ್ದಾರೆ ನಾವು ರಾಜ್ಯದಲ್ಲಿ ಕನಿಷ್ಠ 24-25 ಸ್ಥಾನ ಗೆಲ್ಲುತ್ತೇನೆ. ಕಾಂಗ್ರೆಸ್ ನವರು ಏನೇ ಹೇಳಿದರೂ ಅದಕ್ಕೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಕಾಂಗ್ರೆಸ್ ನಲ್ಲಿ ಪ್ರಧಾನಿಯಾಗುವ ಯೋಗ್ಯತೆ ಯಾರಿಗಿದೆ ಹೇಳಿ? ವಿಧಾನಸಭಾ ಚುನಾವಣೆಯಲ್ಲಿ ಬೇರೆ ಚರ್ಚೆಯಾಗಬಹುದು. ಆದ್ರೆ ಮೋದಿಯವರು ಪ್ರಧಾನಿಯಾಗಬೇಕು ಎಂಬುದು ಎಲ್ಲರ ಅಭಿಪ್ರಾಯವಾಗಿದೆ ಎಂದು ಹೇಳಿದರು.
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ವಿಚಾರವಾಗಿ ಹೇಳಿಕೆ ನೀಡಿದ ಅವರು ತನಿಖೆ ಪಾರದರ್ಶನಕವಾಗಿ ನಡೆಯಬೇಕಿದ್ರೆ ಸಿಬಿಐಗೆ ಕೊಡಬೇಕು. ಬಹುತೇಕ ಜನರ ಅಭಿಪ್ರಾಯವೂ ಇದೇ ಆಗಿದೆ ಹಾಗಾಗಿ ಮುಖ್ಯಮಂತ್ರಿಗಳು ಕೂಡಲೇ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಹೇಳಿದರು.
ರಾಜ್ಯದಲ್ಲಿ ಭೀಕರ ಬರಗಾಲ ಬಂದಿದೆ. ಕೆರೆಕಟ್ಟೆ ಬತ್ತಿ ಹೋಗುತ್ತಿದೆ ಬರಗಾಲ ಜನರನ್ನು ಕಿತ್ತು ತಿನ್ನುತ್ತಿದೆ. ರಾಜ್ಯ ಸರ್ಕಾರ ಸಾಲಮನ್ನಾ ಮಾಡಿ ರೈತರಿಗೆ ನೆರವಾಗಬೇಕು. ಸಾಲಮನ್ನ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ.
ಈಶ್ವರಪ್ಪರ ಬಗ್ಗೆ ಮಾಧ್ಯಮದವರು ಪ್ರಶ್ನೆ ಕೇಳುತ್ತಿದ್ದಂತೆ ಉತ್ತರಿಸಲು ನಿರಾಕರಿಸಿದರು , ಈ ಬಗ್ಗೆ ಮಾತನಾಡಲು ಇಷ್ಟ ಪಡುವುದಿಲ್ಲ. ಶಿವಮೊಗ್ಗದಲ್ಲಿ ರಾಘವೇಂದ್ರ 2.5 ಲಕ್ಷ ಲೀಡ್ಗಳಿಂದ ಗೆಲ್ಲುತ್ತಾರೆ ಎಂದರು