
ಅಬಕಾರಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಬಿಆರ್ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮೇ 7ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ…!
ಇದಕ್ಕೂ ಮೊದಲು ನ್ಯಾಯಾಲಯ ಕೇಜ್ರಿವಾಲ್ ಅವರನ್ನು ಏಪ್ರಿಲ್ 1 ರಿಂದ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು. ಇದಾದ ಬಳಿಕ ನ್ಯಾಯಾಲಯ ಮತ್ತೊಮ್ಮೆ ಅವರ ನ್ಯಾಯಾಂಗ ಬಂಧನವನ್ನು ಏಪ್ರಿಲ್ 23ರವರೆಗೆ ವಿಸ್ತರಣೆ ಮಾಡಿತ್ತು…!!
ಈ ಪ್ರಕರಣದಲ್ಲಿ ಸಿಎಂ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು. ಇದೀಗ ಮೇ 7ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿದೆ. ಹಾಗೆಯೇ ಬಿಆರ್ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನೂ ಕೂಡ ವಿಸ್ತರಿಸಲಾಗಿದೆ…!