
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಮತ್ತೊಂದು ಕೊಲೆ ಪ್ರಕರಣ
ಹುಬ್ಬಳ್ಳಿಯಲ್ಲಿ ದುಷ್ಕರ್ಮಿಗಳಿಂದ ಚಾಕುವಿನಿಂದ ಇರಿದು ದೇವಸ್ಥಾನದ ಪೂಜಾರಿಯ ಬರ್ಬರ ಕೊಲೆ ಆಗಿದೆ.
ಹುಬ್ಬಳ್ಳಿಯ ಈಶ್ವರನಗರದಲ್ಲಿ ವೈಷ್ಣವಿ ದೇವಸ್ಥಾನದ ಪೂಜಾರಿಯನ್ನು ಚಾಕುವಿನಿಂದ ಇರಿದು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವಂತಹ ಘಟನೆ ಇಂದು ನಡೆದಿದೆ.
ಹತ್ಯೆ ಆದ ವ್ಯಕ್ತಿ ಹೆಸರು ದೇವೇಂದ್ರಪ್ಪ , ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ತಿಳುದು ಬಂದಿದೆ.
ಒಂದು ವರ್ಷಗಳ ಹಿಂದೆ ಕೂಡ ದೇವೇಂದ್ರಪ್ಪ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದರು ಆದರೆ ಅಂದು. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದರು.
ಕೊಲೆಗೆ ಇನ್ನು ಸರಿಯಾದ ಕಾರಣ ತಿಳಿದುಬಂದಿಲ್ಲ. ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಈ ಸಂಬಂಧ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಪೊಲೀಸರ ತನಿಖೆಯ ನಂತರ ಹೆಚ್ಚಿನ ಮಾಹಿತಿ ತಿಳಿಯಬೇಕಾಗಿದೆ .
ನೇಹಾ ಹಿರೇಮಠ ಹಾಗೂ ಅಂಜಲಿ ಹತ್ಯೆ ಪ್ರಕರಣ ಇಡೀ ಹುಬ್ಬಳ್ಳಿಯನ್ನ ನಡಗಿಸಿತ್ತು ಈಗ ಈ ಪ್ರಕರಣ ಮತ್ತೆ ಹುಬ್ಬಳ್ಳಿ ಜನರ ನಿದ್ದೆಗೆಡಿಸಿದೆ.