
ಚಾಮರಾಜನಗರ ಕ್ಷೇತ್ರದ ಹಿರಿಯ ಬಿಜೆಪಿ ನಾಯಕ ಹಾಗೂ ಹಾಲಿ ಸಂಸದ ವಿ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಓಲ್ಡ್ ಏರ್ಪೋರ್ಟ್ ರಸ್ತೆಯಲ್ಲಿ ಇರುವ ಮಣಿಪಾಲ್ ಆಸ್ಪತ್ರೆಯಲ್ಲಿ ಮಧ್ಯರಾತ್ರಿ 1.20ಕ್ಕೆ ಕೊನೆಯುಸಿರೆಳೆದಿದ್ದಾರೆ…!
ಮೂತ್ರಕೋಶ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀನಿವಾಸ್ ಪ್ರಸಾದ್ ಮೂರು ದಿನಗಳ ಹಿಂದಷ್ಟೇ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು, ICU ನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು…!!
ಚಿಕಿತ್ಸೆ ಫಲಿಸದೆ ರಾತ್ರಿ ಶ್ರೀನಿವಾಸ್ ಪ್ರಸಾದ್ ನಿಧನರಾಗಿದ್ದಾರೆ..!
ಹತ್ತು ವರ್ಷಗಳ ಹಿಂದೆಯೇ ಈ ಸಮಸ್ಯೆ ಕಾಣಿಸಿಕೊಂಡಿತ್ತು ಚಿಕಿತ್ಸೆಯನ್ನು ಪಡೆದಿದ್ದರು ಆದರೆ ಮತ್ತೆ ಈ ಸಮಸ್ಯೆ ಕಾಣಿಸಿಕೊಂಡಿತ್ತು..!
ಶ್ರೀನಿವಾಸ್ ಪ್ರಸಾದ್ ಅವರ ಪಾರ್ಥಿವ ಶರೀರವನ್ನು ಮೈಸೂರಿಗೆ ಶಿಫ್ಟ್ ಮಾಡಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ…!!