
ಹೊಸ ದೆಹಲಿ – ಕೇಂದ್ರ ಸರ್ಕಾರ ಜೂನ್ 25 ನೇ ತಾರೀಖನ್ನು ಸಂವಿಧಾನ ಹತ್ಯಾ ದಿವಸ್ ಎಂದು ಘೋಷಣೆ ಮಾಡಿದೆ…!
ಈ ಸಂಬಂಧ ಕೇಂದ್ರ ಸರ್ಕಾರ ಅಧಿಸೂಚನೆಯೊಂದನ್ನು ಹೊರಡಿಸಿದೆ…!!
ಇಂದಿರಾಗಾಂಧಿ ಪ್ರಧಾನಿಯಾಗಿದ್ದ ಅವಧಿಯಲ್ಲಿ 1975ರ ಜೂನ್ 25ರಂದು ದೇಶಾದ್ಯಂತ ತುರ್ತು ಪರಿಸ್ಥಿತಿ ಹೇರಿಕೆ ಮಾಡಿದ್ದರು…!
ಹೀಗಾಗಿ ಆ ದಿನವನ್ನು ಸಂವಿಧಾನ ಹತ್ಯಾ ದಿವಸ್ ಎಂದು ಆಚರಣೆ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ…!!
1975ರ ಜೂನ್ 25ರಂದು ಅಂದಿನ ಪ್ರಧಾನಿ ಇಂದಿರಾಗಾಂಧಿಯವರು ತಮ್ಮ ಸರ್ವಾಧಿಕಾರಿ ಮನಸ್ಥಿತಿಯನ್ನು ಪ್ರದರ್ಶಿಸಿ, ದೇಶದಲ್ಲಿ ತುರ್ತುಪರಿಸ್ಥಿತಿ ಹೇರುವ ಮೂಲಕ ಭಾರತದ ಪ್ರಜಾಪ್ರಭುತ್ವದ ಕತ್ತು ಹಿಸುಕಿದ್ದರು, ಲಕ್ಷಗಟ್ಟಲೆ ಜನರನ್ನು ವಿನಾಕಾರಣ ಜೈಲಿಗೆ ಹಾಕಲಾಯಿತು ಮತ್ತು ಮಾಧ್ಯಮಗಳ ಧ್ವನಿಯನ್ನು ಹತ್ತಿಕ್ಕಲಾಯಿತು, ಭಾರತ ಸರ್ಕಾರವು ಪ್ರತಿ ವರ್ಷ ಜೂನ್ 25 ಅನ್ನು ‘ಸಂವಿಧಾನ ಹತ್ಯೆ ದಿನ’ ಎಂದು ಆಚರಿಸಲು ನಿರ್ಧರಿಸಿದೆ, 1975ರ ತುರ್ತುಪರಿಸ್ಥಿತಿಯ ಅಮಾನವೀಯ ನೋವನ್ನು ಸಹಿಸಿಕೊಂಡವರೆಲ್ಲರ ಅಪಾರ ಕೊಡುಗೆಯನ್ನು ಈ ದಿನ ನೆನಪಿಸುತ್ತದೆ ಎಂದು ಕೇಂದ್ರ ಗ್ರಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ…!
ತುರ್ತು ಪರಿಸ್ಥಿತಿಯ ಅವಧಿಯಲ್ಲಿ ಅಧಿಕಾರ ದುರುಪಯೋಗದ ವಿರುದ್ಧ ಹೋರಾಡಿದ ಎಲ್ಲರಿಗೂ ಗೌರವ ಸಲ್ಲಿಸುವ ಸಲುವಾಗಿ ಭಾರತ ಸರ್ಕಾರವು ಜೂನ್ 25 ಅನ್ನು ಸಂವಿಧಾನ್ ಹತ್ಯಾ ದಿವಸ್ ಎಂದು ಘೋಷಿಸಿದೆ…!