
ದಾವಣಗೆರೆ: ಶುಕ್ರವಾರ ರಾತ್ರಿ ಚನ್ನಗಿರಿ ಪೊಲೀಸ್ ವಸದಲ್ಲಿ ಇದ್ದ ವ್ಯಕ್ತಿಯ ಸಾವು ಲಾಕಪ್ ಡೆತ್ ಎಂದು ಆರೋಪಿಸಿ , ಗುಂಪು ಒಂದು ಪೊಲೀಸ್ ಠಾಣೆಯ ಮೇಲೆ ಕಲ್ಲುತೂರಾಟ ಪ್ರಕರಣದ ತನಿಖೆಯನ್ನು ಇದೀಗ ಸಿಐಡಿಗೆ ವಹಿಸಲಾಗಿದೆ.
ಮಟ್ಕಾ ನಡೆಸುತ್ತಿದ್ದ ಆರೋಪದಲ್ಲಿ ಚನ್ನಗಿರಿ ಪೊಲೀಸರು ದಾವಣಗೆರೆಯ ಟಿಪ್ಪು ನಗರ ನಿವಾಸಿ ಅದಿಲ್ ಎಂಬಾತನನ್ನ ವಶಕ್ಕೆ ಪಡೆದಿದ್ದರು. ಠಾಣೆಗೆ ಕರೆದುಕೊಂಡು ಬಂದು ಕೆಲವೇ ನಿಮಿಷಗಳಲ್ಲಿ ಠಾಣೆಯಲ್ಲಿ ಅದಿಲ್ ಕುಸಿದು ಬಿದ್ದಿದ್ದು ಕೂಡಲೇ ಆತನನ್ನು ಚೆನ್ನಗಿರಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದನು.
ಲಾಕಪ್ ಡೆತ್ ಎಂದು ಆರೋಪಿಸಿ ಉದ್ವಿಗ್ನಗೊಂಡ ಮೃತನ ಸಂಬಂಧಿಕರು ಮತ್ತು ನೂರಾರು ಜನರ ಗುಂಪೊಂದು ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆ ನಡೆಸಿದ್ದು ಅಲ್ಲೆ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ್ದರು ಈ ಘಟನೆಯಲ್ಲಿ 11 ಜನ ಪೊಲೀಸರಿಗೆ ಗಂಭೀರವಾಗಿ ಗಾಯಗಳು ಆಗಿದ್ದಾವೆ 7 ಪೊಲೀಸ್ ವಾಹನ ಹಾಗೂ ಕೆಲವು ಕಾಸಿಗೆ ವಾಹನಗಳಿಗೂ ಹಾನಿಯಾಗಿದೆ.
ಪೊಲೀಸರು ಮೃತನ ಸಂಬಂಧಿಕರಿಗೂ ಹಾಗೂ ತಂದೆಗೆ ಪೊಲೀಸ್ ಠಾಣೆಯ ಸಿಸಿಟಿವಿ ದೃಶ್ಯಗಳನ್ನು ತೋರಿಸಿ ಇದು ಲಾಕಪ್ ಡೆತ್ ಅಲ್ಲ ಎಂದು ತಿಳಿಸಿದರು.
ಪೊಲೀಸ್ ಠಾಣೆಯ ಧ್ವಂಸ, ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 25 ಆರೋಪಿಗಳನ್ನು ಭಾನುವಾರ ಬಂಧಿಸಲಾಗಿದೆ. ಇನ್ನು ಠಾಣೆ ಧ್ವಂಸ, ದೊಂಬಿ ಹಾಗೂ ಪೊಲೀಸ್ ವಶದಲ್ಲಿದ್ದ ಆದಿಲ್ ಸಾವಿನ ಕೇಸ್ಗೆ ಸಂಬಂಧಿಸಿದಂತೆ ಒಟ್ಟು ಏಳು ಪ್ರಕರಣಗಳು ದಾಖಲಾಗಿವೆ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.
ಬೆಂಗಳೂರಿನ ಕೆಜಿ ಹಳ್ಳಿ ಡಿಜಿ ಹಳ್ಳಿ ರೀತಿಯ ಈ ಪ್ರಕರಣ ರಾಜ್ಯ ವ್ಯಾಪ್ತಿ ಸದ್ದು ಮಾಡಿತ್ತು.
ಬಿಜೆಪಿ ನಾಯಕರು ಸರಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ ಎಂದು ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿಯನ್ನು ನಡೆಸಿದರು.
ರಾಜ್ಯ ಸರಕಾರ ಈ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿ ಆದೇಶಿಸಿದ್ದು ಸಿಐಡಿ ಅಧಿಕಾರಿಗಳು ಇಂದು ಚೆನ್ನಗಿರಿಗೆ ಬಂದು ತನಿಖೆಯನ್ನು ಪ್ರಾರಂಭ ಮಾಡಿದ್ದಾರೆ.
ಚೆನ್ನಗಿರಿಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಬರುವಂತಹ, ಧಾರ್ಮಿಕ ಹಾಗೂ ವ್ಯಕ್ತಿ ನಿಂದನೆ ಪೋಸ್ಟ್ಗಳು, ಪ್ರಚೋದನಕಾರಿ ಹೇಳಿಕೆ, ವಿಡಿಯೋ ಶೇರ್ ಮಾಡಬಾರದು. ಶಾಂತಿ, ಸುವ್ಯವಸ್ಥೆಗೆ ಧಕ್ಕೆ ಬರುವಂತ ಪೋಸ್ಟ್ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಎಸ್ಪಿ ಉಮಾ ಪ್ರಶಾಂತ್ ಎಚ್ಚರಿಸಿದ್ದಾರೆ.
ಚನ್ನಗಿರಿಯಲ್ಲಿ ಪೊಲೀಸ್ ಬಂದೋಬಸ್ತ್ ಮುಂದುವರಿದಿದ್ದು, ಪಟ್ಟಣ ಸಹಜ ಸ್ಥಿತಿಯತ್ತ ಮರುಳುತ್ತಿದೆ.