
ಬೆಂಗಳೂರು: ಶ್ರೀರಂಗಪಟ್ಟಣದ ಮೂಡಲ ಬಾಗಿಲು ನಲ್ಲಿದ್ದ ಆಂಜನೇಯ ಸ್ವಾಮಿ ದೇವಾಲಯವನ್ನು ಧ್ವಂಸಗೊಳಿಸಿ ಅದರ ಮೇಲೆ ಟಿಪ್ಪು ಸುಲ್ತಾನ್ ವಿವಾದಿತ ಜಾಮೀಯಾ ಮಸೀದಿ ನಿರ್ಮಾಣ ಮಾಡಿದ್ದಾರೆ ಈ ವಿವಾದಕ್ಕೆ ಈಗ ಹೊಸದೊಂದು ತೀರವ ಸಿಕ್ಕಿದೆ.
ದೇವಸ್ಥಾನವನ್ನು ದ್ವಂಸ ಮಾಡಿ ಅದರ ಮೇಲೆ ಮಸೀದಿ ನಿರ್ಮಾಣ ಮಾಡಲಾಗಿದೆ ಎಂದು ಮತ್ತು ಈ ಕುರಿತು ಉತ್ಖನನ ನಡೆಸಿ ವರದಿ ಸಲ್ಲಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾಲಯಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ
ಭಜರಂಗ ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಸಲ್ಲಿಸಿರುವ
ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಹಾಗೂ ಕೆ. ವಿ. ಅರವಿಂದ್ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲರು,ಮೂಡಲ ಬಾಗಿಲು ಆಂಜನೇಯ ಸ್ವಾಮಿ ದೇವಾಲಯವನ್ನು ವಿಜಯನಗರ ಸಾಮ್ರಾಜ್ಯ ಅರಸರು ಹಾಗೂ ಮೈಸೂರು ಸಾಮ್ರಾಜ್ಯ ಹಾಗೂ ದಳವಾಯಿ ದೊಡ್ಡಯ್ಯ ಸೇರಿ ಅನೇಕ ಆಡಳಿತಗಾರರು ಸಂರಕ್ಷಣೆ ಮಾಡಿ ಆಡಳಿತವನ್ನು ನಡೆಸಿದ್ದರು. ಆದರೆ, ಟಿಪ್ಪು ಸುಲ್ತಾನ್ ದೇವಸ್ಥಾನವನ್ನ ದ್ವಂಸ ಮಾಡಿ ಬಳಿಕ ಅದೇ ಜಾಗದಲ್ಲಿ ಜಾಮೀಯಾ ಮಸೀದಿ ನಿರ್ಮಿಸಿದ್ದಾನೆ ” ಎಂದು ಅರ್ಜಿದಾರರ ಪರ ವಕೀಲರು ಆರೋಪಿಸಿದರು.
ಪುರಾತತ್ವ ಸರ್ವೇಕ್ಷಣಾಲಯಕ್ಕೆ ನಿರ್ದೇಶನ ನೀಡಿ
‘ ಈ ಬಗ್ಗೆ ಅಧ್ಯಯನ ಸರ್ವೆ ಹಾಗೂ ಉತ್ಖನನ ನಡೆಸಿ 30 ದಿನಗಳೊಳಗೆ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾಲಯಕ್ಕೆ ನಿರ್ದೇಶಿಸಬೇಕು. ದೇವಾಲಯದ ಆವರಣದಲ್ಲಿರುವ ಹಿಂದೂ ಸಂಸ್ಕೃತಿ ಹಾಗೂ ಪರಂಪರೆ ಕುರುಹುಗಳಾಗಿರುವ ಗರುಡಗಂಬ, ಕಲ್ಯಾಣಿ, ಸ್ತೂಪ, ಸ್ತಂಭ, ಹಿಂದೂ ದೇವ-ದೇವತೆಗಳ ಕಲ್ಲಿನ ಕೆತ್ತನೆಗಳು ಹಾಗೂ ಭೂಗತ ದೇವಸ್ಥಾನದ ಭಾಗ, ವಾಸ್ತು ಶಿಲ್ಪ, ಹೂತಿಟ್ಟ ವಿಗ್ರಹಗಳನ್ನು ಸಂರಕ್ಷಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾಲಯ, ಸರಕಾರ ಮತ್ತು ಜಿಲ್ಲಾಡಳಿತಕ್ಕೆ ನಿರ್ದೇಶಿಸಬೇಕು ” ಎಂದೂ ಕೋರಿದ್ದಾರೆ.
ಈ ಪ್ರಕರಣದ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ರಾಜ್ಯ ಸರ್ಕಾರ ಹಾಗೂ ಪ್ರಕರಣ ಸಂಬಂಧ ಭಾರತೀಯ ಪುರಾತತ್ವ ಸರ್ವೇಕ್ಷಣಾಲಯ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಮುಜರಾಯಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಮಂಡ್ಯ ಜಿಲ್ಲಾಧಿಕಾರಿ, ರಾಜ್ಯ ಧಾರ್ಮಿಕ ಪರಿಷತ್, ಕರ್ನಾಟಕ ರಾಜ್ಯ ವಕ್ಫ ಮಂಡಳಿಗೆ ಸೇರಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಜು. 11ಕ್ಕೆ ಮುಂದೂಡಿದೆ.