
ಬೆಂಗಳೂರು : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಅನೇಕ ಜಿಲ್ಲೆಗಳಲ್ಲಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ
ಕೊಡಗು ಜಿಲ್ಲೆಯ ಸುಮಾರು ಎಂಟು ಗ್ರಾಮಗಳು ಜಲಾವೃತವಾಗಿವೆ 90 ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗಿದೆ. 4 ಕಡೆ ಕಾಳಜಿ ಕೇಂದ್ರವನ್ನು ತೆರೆಯಲಾಗಿದ್ದು, ಅಲ್ಲಿ 35 ಮಂದಿಯನ್ನು ಇರಿಸಲಾಗಿದೆ.!
ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ತಗ್ಗು ಪ್ರದೇಶದ ಗ್ರಾಮಗಳಿಗೆ ನೀರು ನುಗ್ಗುತ್ತಿದ್ದು
ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯನ್ನು ನಡೆಸಿದರು, “ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜನ-ಜಾನುವಾರು ಹಾಗೂ ಆಸ್ತಿಪಾಸ್ತಿ ರಕ್ಷಣೆಗೆ ಮುಂದಾಗುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ವ್ಯಾಪಕ ಮಳೆಯಾಗುತ್ತಿದ್ದು, ಇನ್ನೂ ಎರಡು ಮೂರು ದಿನ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಈಗಾಗಲೇ ನಿಯೋಜಿಸಿರುವ ನೋಡಲ್ ಅಧಿಕಾರಿಗಳು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಅಗತ್ಯ ಮುನ್ನೆಚ್ಚರ ವಹಿಸುವಂತೆ” ಸೂಚಿಸಿದರು.!
ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದೆ. ಜೂನ್ ಆರಂಭದಲ್ಲಿ ಬಿತ್ತನೆ ಬೇಸಾಯ ಮಾಡಿದ ಗದ್ದೆಗಳೆಲ್ಲಾ ಮಳೆ ನೀರಲ್ಲಿ ಜಲಾವೃತವಾಗಿದೆ. ಮಳೆಯ ಅಬ್ಬರ ಜೊತೆ ಕಡಲ ತೀರದಲ್ಲಿ ಗಾಳಿಯ ತೀವ್ರತೆಯೂ ಹೆಚ್ಚಾಗಿದೆ. ನಾವುಂದದಲ್ಲಿ ಉಕ್ಕೇರಿ ಹರಿಯುತ್ತಿರುವ ಕಡಲಬ್ಬರಕ್ಕೆ ತೆಂಗಿನ ಮರ ನೀರುಪಾಲಾಗಿದ್ದು, ತಡೆಗೋಡೆಗಳು ಕುಸಿಯುವ ಭೀತಿ ಎದುರಾಗಿದೆ.!
ಉಡುಪಿಯಲ್ಲಿ ಇಂದು ಸಹ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಪದವಿ, ಎಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜುಗಳು ಎಂದಿನಂತೆ ಇರಲಿದೆ ಎಂದು ಡಿಸಿ ಆದೇಶಿಸಿದ್ದಾರೆ.!
ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿತ ಮುಂದುವರೆದಿದ್ದು
ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿ 766Eನಲ್ಲಿ ಗುಡ್ಡ ಕುಸಿತ ಉಂಟಾಗಿದ್ದು ಶಿರಸಿ – ಕುಮಟಾ ರಾಷ್ಟ್ರೀಯ ಹೆದ್ದಾರಿಯ ರಾಗಿಹೊಸಳ್ಳಿ ಬಳಿ ಗುಡ್ಡಕುಸಿತವಾಗಿದ್ದು, ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿ ಕಳೆದ 4 ದಿನಗಳಿಂದ ಬಂದ್ ಆಗಿದೆ. ಹೆದ್ದಾರಿಯ ಅಲ್ಲಲ್ಲಿ ಗುಡ್ಡ ಮತ್ತೆ ಕುಸಿಯುತ್ತಿದ್ದು ವಾಹನ ಸಂಚಾರಕ್ಕೆ ಅಡ್ಡಿಯಾಗುತಿದೆ.
ಹಾಗೆ ಕುಸಿಯುತ್ತಿರುವ ಮಣ್ಣುಗಳನ್ನು ತೆರೆವುಗೊಳಿಸಲು ಮಳೆ ಅಡ್ಡಿಯಾಗುತ್ತಿದೆ.!
ಶಿರೂರು ಗುಡ್ಡ ಕುಸಿದಿದ್ದು ಕಳೆದ ನಾಲ್ಕು ದಿನದಿಂದ ಕಾರ್ಯಾಚರಣೆ ನಡೆಯುತ್ತಿದ್ದು ಗುಡ್ಡ ಕುಸಿತದ ಸ್ಥಳಕ್ಕೆ ಐಜಿಪಿ ಅಮಿತ್ ಸಿಂಗ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜಿಲ್ಲೆಯಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.!
ಮೈಸೂರು ಜಿಲ್ಲೆಯಲ್ಲಿ ಮಳೆ ಆರ್ಭಟ ಜೋರಾಗಿದ್ದು ಅನೇಕ ಕಡೆ ಜನಜೀವನ ಅಸ್ತವ್ಯಸ್ತಗೊಂಡಿದ್ದು ಪಿರಿಯಾಪಟ್ಟಣ ತಾಲೂಕು ಕಗ್ಗುಂಡಿ ಗ್ರಾಮದಲ್ಲಿ ಬಾರಿ ಮಳೆಯಾಗುತ್ತಿದ್ದ ಕಾರಣ, ಶಿಥಲಗೊಂಡಿದ್ದ ಗೋಡೆ ಕುಸಿದು ಮಗುವಿನ ಜೊತೆ ಮಲಗಿದ್ದ ಹೇಮಲತಾ ಎನ್ನುವವರು ಮೃತ ಪಟ್ಟಿದ್ದಾರೆ. ಗೋಡೆ ಖುಷಿಯುತ್ತಿರುವುದನ್ನು ಗಮನಿಸಿ ತಾಯಿ ಹೇಮಲತಾ ಮಗುವನ್ನ ಹೊರಕ್ಕೆ ಎಸೆದಿದ್ದಾರೆ ಮಗು ಪ್ರಾಣಾಪಾಯದಿಂದ ಪಾರಾಗಿದೆ.!
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ದಿನವಿಡೀ ಸುರಿದ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು ತಗ್ಗು ಪ್ರದೇಶಗಳಿಗೆ ನೆರೆ ನೀರು ನುಗ್ಗಿ ಸಲ್ಪ ಸಮಯ ಆತಂಕ ಸೃಷ್ಟಿಯಾಗಿತ್ತು , ಶುಕ್ರವಾರ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಉನ್ನತ ಅಧಿಕಾರಿಗಳೊಂದಿಗೆ ಜಿಲ್ಲೆಯ ವಿವಿಧ ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.!
ಇನ್ನು ನದಿಗಳ ನೀರಿನ ಮಟ್ಟ ಹೆಚ್ಚುತ್ತಿರುವುದರಿಂದ ನದಿ ಪಾತ್ರದ ಜನರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲು ಸೂಚಿಸಲಾಗಿದೆ.
ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಜು.20ರಂದು ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.!
ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು ಶಾಲಾ-ಕಾಲೇಜುಗಳಿಗೆ ಇಂದು ಕೂಡ ರಜೆ ಘೋಷಣೆ ಮಾಡಲಾಗಿದೆ ಶುಕ್ರವಾರ ಸಂಜೆ ಹೊಸನಗರ, ಸಾಗರ, ಸೊರಬ ಹಾಗೂ ತೀರ್ಥಹಳ್ಳಿ ತಾಲ್ಲೂಕುಗಳಲ್ಲಿ ಮಾತ್ರ ರಜೆ ಘೋಷಿಸಿದ್ದ ಜಿಲ್ಲಾಡಳಿತ ಶನಿವಾರ ಮುಂಜಾನೆ ರಜೆಯನ್ನು ಶಿವಮೊಗ್ಗ ಹಾಗೂ ಭದ್ರಾವತಿ, ಶಿಕಾರಿಪುರ ತಾಲ್ಲೂಕುಗಳಿಗೂ ನೀಡಿ ಆದೇಶ ಹೊರಡಿಸಿದೆ ಜಿಲ್ಲಾ ಆಡಳಿತ.!
ಇನ್ನು ಹಾಸನ ಶಿಕಾರಿಪುರದಲ್ಲಿಯೂ ಮಳೆ ಮುಂದುವರಿದಿದ್ದು ಜಿಲ್ಲಾಡಳಿತ ಕೆಲವು ಮುನ್ಸೂಚನೆಗಳನ್ನು ನೀಡಿದೆ.!
ಇನ್ನು ಹವಾಮಾನ ಇಲಾಖೆ ಸೂಚನೆ ಪ್ರಕಾರ ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.!