
ಬೆಂಗಳೂರು : ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಿಂದ ಭರ್ಜರಿ ಮಳೆ ಆಗುತ್ತಿದ್ದು ಅನೇಕ ಕಡೆಗಳಲ್ಲಿ ಸೇತುವೆಗಳು ಮುಳುಗಡೆಯಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಸುರಿಯುತ್ತಿರುವ ಭಾರೀ ಮಳೆಯಿಂದ ಈಗಾಗಲೇ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರವಾಹನ ಸ್ಥಿತಿ ನಿರ್ಮಾಣವಾಗಿದೆ. ಹಾಗೆಯೇ ಜುಲೈ 26ರವರೆಗೆ ಕರಾವಳಿ, ದಕ್ಷಿಣ ಒಳನಾಡು ಭಾಗದಲ್ಲಿ ಮಳೆ ಮತ್ತಷ್ಟು ಚುರುಕು ಪಡೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಜಿಲ್ಲೆಯ ಕೆಲವು ಭಾಗದ ಜನರು ಪ್ರವಾಹದ ಭೀತಿಯಲ್ಲಿ ಜೀವವನ್ನು ಕೈಯಲ್ಲಿಡಿದು ಜೀವನ ಸಾಗಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರಿ ಮಳೆ ಇರುವ ಕಾರಣ ಹಾಗೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಕೆಲವು ಜಿಲ್ಲೆಯ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಉಡುಪಿ ಜಿಲ್ಲೆಯ ಬೈಂದೂರು, ಹೆಬ್ರಿ, ಕುಂದಾಪುರ ಕಾರ್ಕಳ ತಾಲೂಕಿನಲ್ಲಿ ಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಬೈಂದೂರು, ಕುಂದಾಪುರ, ಹೆಬ್ರಿ ಮತ್ತು ಕಾರ್ಕಳ ತಾಲೂಕುಗಳ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಗುರುವಾರ ರಜೆ ಘೋಷಿಸಿ ಆಯಾ ತಾಲೂಕು ತಹಶೀಲ್ದಾರರು ಆದೇಶ ನೀಡಿದ್ದಾರೆ.
ಇನ್ನೂ ಬೆಳಗಾವಿ, ಖಾನಾಪುರ, ಕಿತ್ತೂರು, ಬೈಲಹೊಂಗಲ ತಾಲ್ಲೂಕಿನಲ್ಲಿ ಶಾಲೆಗಳ ಜೊತೆಗೆ ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಳೆದ ಒಂದು ವಾರದಿಂದ ಬಿಟ್ಟು ಬಿಡದೇ ಮಳೆ ಸುರಿಯುತ್ತಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಳಗಾವಿ ಜಿಲ್ಲಾಡಳಿತ ರಜೆ ಘೋಷಿಸಿದೆ.
ಇನ್ನು ಮಲೆನಾಡ ಭಾಗದಲ್ಲಿ ಗಾಳಿ ಸಹಿತ ಭಾರಿ ಮಳೆ ಆಗುತ್ತಿರುವುದರಿಂದ ಚಿಕ್ಕಮಗಳೂರು, ಕಳಸ, ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ, ಶೃಂಗೇರಿ ತಾಲ್ಲೂಕಿನ ಅಂಗನವಾಡಿ ಮತ್ತು ಶಾಲೆಗಳಿಗೆ ಗುರುವಾರ ರಜೆ ನೀಡಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ನಾರಾಯಣ ಕನಕರಡ್ಡಿ ತಿಳಿಸಿದ್ದಾರೆ.
ಧಾರವಾಡದಲ್ಲೂ ಮಳೆ ಅಬ್ಬರ ಜೋರಾಗಿದ್ದು, ಇಂದು, ನಾಳೆ ಅಂದರೆ ಜುಲೈ 25 ರ ರಂದು 26ರಂದು ಜಿಲ್ಲೆಯಾದ್ಯಂತ ಶಾಲೆ ಕಾಲೇಜ್ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಪೂರ್ವ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಕಾಲೇಜುಗಳಿಗೆ 2 ದಿನ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ದಿವ್ಯಾಪ್ರಭು ಆದೇಶ ಮಾಡಿದ್ದಾರೆ. ಮುಂದಿನ ಸಾರ್ವಜನಿಕ ರಜಾ ದಿನಗಳಲ್ಲಿ ಹೆಚ್ಚುವರಿ ವರ್ಗಗಳನ್ನು ನಡೆಸುವಂತೆ ಸೂಚನೆ ನೀಡಿದ್ದಾರೆ.
ಇನ್ನು ಮಲೆನಾಡ ಭಾಗದಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆ ಹೊನ್ನಾವರ ಶರಾವತಿ ನದಿ ಪಾತ್ರದ ಜನರಿಗೆ ಸುರಕ್ಷದ ಸ್ಥಳಕ್ಕೆ ತೆರಳಲು ಸೂಚನಾ ಪುತ್ರ ಹೊಡಿಸಲಾಗಿದೆ.
ಬೈಂದೂರು ಕುಂದಾಪುರ ಹಾಗೂ ಉಡುಪಿ ಜಿಲ್ಲೆಯ ಕೆಲವು ಭಾಗದಲ್ಲಿ ಭಾರಿ ಗಾಳಿ ಹಾಗೂ ಮಳೆಯಾಗಲಿದ್ದು ಜಿಲ್ಲಾಡಳಿತದ ಸೂಚನೆಯನ್ನು ಎಲ್ಲರೂ ಪಾಲಿಸಿ