
ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣಗಳು ಜನರಲ್ಲಿ ಆತಂಕ ಮೂಡಿಸಿದೆ, ಮಕ್ಕಳಲ್ಲಿ ಹೆಚ್ಚಾಗಿ ಡೆಂಗ್ಯೂ ಪ್ರಕರಣ ಕಂಡು ಬಂದಿದೆ ಎಂದು ಹೇಳಲಾಗುತ್ತಿದೆ ಕಳೆದ 24 ಗಂಟೆಯಲ್ಲಿ 1 ವರ್ಷದಿಂದ 18 ವರ್ಷದೊಳಗಿನ 154 ಮಕ್ಕಳಿಗೆ ಡೆಂಗ್ಯೂ ಬಂದಿದೆ. ಒಂದು ವಾರದ ಹಿಂದೆ 1 ವರ್ಷದಿಂದ 18 ವರ್ಷದೊಳಗಿನ 44 ಮಕ್ಕಳಿಗೆ ಡೆಂಗ್ಯೂ ಬಾಧಿಸಿತ್ತು. ಜನವರಿಯಿಂದ ಇಲ್ಲಿಯವರೆಗೆ ಒಟ್ಟು 2395 ಮಕ್ಕಳಲ್ಲಿ ಡೆಂಗ್ಯೂ ಕಾಣಿಸಿಕೊಂಡಿದೆ.
ರಾಜ್ಯದಲ್ಲಿ ಕೆಲವು ದಿನಗಳಿಂದ ಭಾರಿ ಮಳೆ ಆಗುತ್ತಿರುವುದರಿಂದ ಮನೆ ಸುತ್ತಮುತ್ತಲಿನ ವಾತಾವರಣದಲ್ಲಿ ಸೊಳ್ಳೆಗಳ ಸಂಖ್ಯೆಯು ಕೂಡ ಹೆಚ್ಚಾಗುತ್ತಿದೆ, ಇದರಿಂದ ದಿನದಿಂದ ದಿನಕ್ಕೆ ಡೆಂಗಿಯೂ ಪ್ರಕರಣಗಳು ಕೂಡ ಹೆಚ್ಚುತ್ತಿದೆ,
ರಾಜ್ಯದಲ್ಲಿ ಕಳೆದ ಒಂದು ತಿಂಗಳಿನಿಂದ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಜನವರಿಯಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು 8658 ಪ್ರಕರಣಗಳು ದಾಖಲಾಗಿವೆ. ಏಳು ಜನ ಮೃತಪಟ್ಟಿದ್ದಾರೆ. ಆದರೆ ಆತಂಕಕ್ಕೆ ಕಾರಣವಾಗಿರುವ ವಿಷಯ ಏನೆಂದರೆ ಡೆಂಗ್ಯೂ ಮಕ್ಕಳಲ್ಲೇ ಹೆಚ್ಚು ಭಾದಿತರಾಗುತ್ತಿರುವುದು.
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಡೆಂಗ್ಯೂ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡಿದ್ದು, ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, ಜುಲೈ 13ಕ್ಕೆ ಒಟ್ಟು 23 ಸಕ್ರಿಯ ಪ್ರಕರಣಗಳಿವೆ. ಇವರಲ್ಲಿ ಇಬ್ಬರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಖಾಸಗಿಯಾಗಿ ಚಿಕಿತ್ಸೆ ಪಡೆಯುವವರನ್ನು ಲೆಕ್ಕಕ್ಕೆ ತೆಗೆದುಕೊಂಡರೆ ಈ ಸಂಖ್ಯೆಯಲ್ಲಿ ಹೆಚ್ಚಳವಾಗಬಹುದು ಎಂದು ಹೇಳಲಾಗುತ್ತಿದೆ.
ಮಂಗಳೂರಿನ ದರಳಕಟ್ಟೆ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಜ್ವರದಿಂದ ಮರದ ಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ಜಿಲ್ಲಾವಾರು ಡೆಂಗ್ಯೂ ಪ್ರಕರಣಗಳನ್ನು ನೋಡುವುದಾದರೆ:
ಕಳೆದ 24 ಗಂಟೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿನ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ. ಶನಿವಾರ ಒಟ್ಟು 202 ಪ್ರಕರಣಗಳು ದಾಖಲಾಗಿದ್ದು, 16 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮೂಲಕ ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ 2835ಕ್ಕೆ ಏರಿಕೆ ಆಗಿದೆ. ಉಳಿಂದ ಬೆಂಗಳೂರು ನಗರದಲ್ಲಿ 5, ಬೆಂಗಳೂರು ಗ್ರಾಮಂತರದಲ್ಲಿ 1 ಪ್ರಕರಣಗಳು ದಾಖಲಾಗಿವೆ.
ಇನ್ನು ಕೋಲಾರದಲ್ಲಿ 17, ತುಮಕೂರು 12, ದಾವಣಗೆರೆ 8, ಶಿವಮೊಗ್ಗ 16, ಬೆಳಗಾವಿ 6, ವಿಜಯಪುರ 2, ಬಾಗಲಕೋಟೆ 12, ಧಾರವಾಡ 20, ಉತ್ತರ ಕನ್ನಡ 3, ಕಲಬುರಗಿ 12, ಯಾದಗಿರಿ 3, ಚಾಮರಾಜನಗರ 4, ಹಾಸನ 20, ದಕ್ಷಿಣ ಕನ್ನಡ 20, ಚಿಕ್ಕಮಗಳೂರು 9, ಕೊಡಗು ಜಿಲ್ಲಯಲ್ಲಿ 9 ಪ್ರಕರಣಗಳು ದಾಖಲಾಗಿವೆ.
ಡೆಂಗ್ಯೂ ನಿಯಂತ್ರಣಕ್ಕೆ ರಾಜ್ಯ ಆರೋಗ್ಯ ಇಲಾಖೆ ಹಾಗೂ ರಾಜ್ಯ ಸರಕಾರ ಇನ್ನು ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕಾಗಿದೆ,
ಹಾಗೆ ಪ್ರತಿಯೊಬ್ಬರು ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ ಗುಂಡಿಗಳಲ್ಲಿ ನೀರು ತುಂಬಿಕೊಳ್ಳಲು ಬಿಡಬೇಡಿ ಹಾಗೂ ಪ್ಲಾಸ್ಟಿಕ್ ಇನ್ನಿತರ ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಎಸೆಯಬೇಡಿ, ತೆಂಗಿನ ಚಿಪ್ಪು ಎಳ್ನೀರಿನ ಚಿಪ್ಪು ಎಲ್ಲಂದರಲ್ಲಿ ಹಾಕಬೇಡಿ. ಜರಗಳು ಕಾಣಿಸಿಕೊಂಡ ತಕ್ಷಣ ವೈದ್ಯರನ್ನು ಸಂಪರ್ಕಿಸಿ.
