
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮೇಲೆ ಇರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವಿಚಾರಣೆಗೆ ಹಾಜುರಾಗುವಂತೆ ಜೂನ್ 12ಕ್ಕೆ ನೋಟಿಸ್ ನೀಡಿತ್ತು ಯಡಿಯೂರಪ್ಪನವರು ರಾಜ್ಯದಲ್ಲಿ ಇಲ್ಲದ ಕಾರಣ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್ ಸಿಐಡಿ ಪಡೆದಿತ್ತು, ನಂತರ ಬಂಧನದ ಭೀತಿಯಿಂದ ಯಡಿಯೂರಪ್ಪನವರು ಪ್ರಕರಣ ರದ್ದು ಮಾಡಬೇಕೆಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು, ಆದರೆ ಯಡಿಯೂರಪ್ಪನವರನ್ನು ಬಂಧಿಸದಂತೆ ಹಾಗೂ ಜೂನ್ 17ರಂದು ಯಡಿಯೂರಪ್ಪನವರಿಗೆ ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ ಆದೇಶಿಸಿತ್ತು.
ಆದರೆ ಬಿಜೆಪಿ ನಾಯಕರು ಇದು ಕಾಂಗ್ರೆಸ್ನ ದ್ವೇಷ ರಾಜಕಾರಣ ಎಂದು ಹೇಳಿದ್ದರು, ಆದರೆ ಬಿಜೆಪಿ ನಾಯಕರಾ ಈ ಆರೋಪಕ್ಕೆ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಜಾಹೀರಾತು ವಿಚಾರದಲ್ಲಿ ರಾಹುಲ್ ಗಾಂಧಿ ಅವರ ವಿರುದ್ಧ ಸುಳ್ಳು ಕೇಸ್ ದಾಖಲಿಸಿರುವುದು ಯಾವ ರಾಜಕಾರಣ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.ಯಡಿಯೂರಪ್ಪ ಅವರ ವಿರುದ್ಧ ಕಾನೂನು ಪ್ರಕ್ರಿಯೆ ದ್ವೇಷದ ರಾಜಕಾರಣ, ರಾಹುಲ್ ಗಾಂಧಿ ಅವರು ಬಂದ ನಂತರ ಈ ಬೆಳವಣಿಗೆ ನಡೆಯುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ನಾನು ಆ ಪ್ರಕರಣದ ಬಗ್ಗೆ ಹೆಚ್ಚು ಮಾಹಿತಿ ಪಡೆದಿಲ್ಲ
ಕಾಂಗ್ರೆಸ್ ಪಕ್ಷ ಯಾರ ಮೇಲೂ ದ್ವೇಷ ಮಾಡುವುದಿಲ್ಲ. ದ್ವೇಷ ರಾಜಕಾರಣದ ಬಗ್ಗೆ ನಾನು ಮಾತನಾಡಿದರೆ ವಿಚಾರ ಎಲ್ಲೆಲ್ಲೋ ಹೋಗುತ್ತದೆ. ಈ ವಿಚಾರದಲ್ಲಿ ನನಗೂ ಅಯ್ಯೋ ಎನಿಸುತ್ತದೆ. ಇಂತಹ ಕಠಿಣ ಪರಿಸ್ಥಿತಿಯನ್ನು ನಾವು ಅನುಭವಿಸಿದ್ದೇವೆ. ರಾಹುಲ್ ಗಾಂಧಿ ಅವರು ಬೆಂಗಳೂರಿಗೆ ಬಂದು ನ್ಯಾಯಾಲಯದ ಮುಂದೆ ಹಾಜರಾದರು. ಅವರ ವಿರುದ್ಧ ಕೇಸು ಹಾಕಿರುವುದು ಯಾವ ರಾಜಕಾರಣ ಎಂದು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.