
ಹೊಳೆನರಸಿಂಹಪುರ ಠಾಣೆಯಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಚ್ ಡಿ ರೇವಣ್ಣ ಅವರಿಗೆ ಜಾಮೀನು ಮಂಜೂರು.
ರೇವಣ್ಣ ಮತ್ತು ಅವರ ಪುತ್ರ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಏಪ್ರಿಲ್ 28 ರಂದು ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದರು.
ಪ್ರಜ್ವಲ್ ರೇವಣ್ಣ ಏಪ್ರಿಲ್ 27ಕ್ಕೆ ವಿದೇಶ ತೆರಳಿದವರು ಇನ್ನೂ ವಾಪಾಸ್ ಆಗಿಲ್ಲ .ಶಾಸಕರ ನಿವಾಸದಲ್ಲಿ ತಂದೆ ಮತ್ತು ಮಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ಹೇಳಿಕೊಂಡಿದ್ದಾರೆ.
ಮಹಿಳೆ ಅಪಹರಣದ ಪ್ರಕರಣದಲ್ಲಿ ಈಗಾಗಲೇ ರೇವಣ್ಣ ಅವರಿಗೆ ಜಾಮೀನು ಸಿಕ್ಕಿದೆ ಇದೀಗ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಎಚ್ ಡಿ ರೇವಣ್ಣ ಅವರಿಗೆ ಜಾಮೀನು ಸಿಕ್ಕಿದೆ.
ಪ್ರಜ್ವಲ್ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಮತ್ತು ಸಂಬಂಧಿತ ಪ್ರಕರಣಗಳ ತನಿಖೆ ನಡೆಸುತ್ತಿರುವ SIT ತಂಡ ಎಚ್ ಡಿ ರೇವಣ್ಣ ಅವರನ್ನು ಕಸ್ಟಡಿಗೆ ಕೋರಿತ್ತು. ಈ ಪ್ರಕರಣದಲ್ಲಿ ರೇವಣ್ಣ ಪರ ವಕೀಲರು ನಿರೀಕ್ಷಣಾ ಜಾಮಿನಿಗೆ ಅರ್ಜಿ ಸಲ್ಲಿಸಿದ್ದರು.
ಎರಡು ದಿನಗಳ ವಿಚಾರಣೆ ಮಾಡಿದ ನ್ಯಾಯಾಲಯ ಸೋಮವಾರಕ್ಕೆ ಬೇಲಿನ ತೀರ್ಪನ್ನು ಮುಂದುವರಿತ್ತು
ಇಂದು ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
5 ಲಕ್ಷ ಬಾಂಡ್, ಶೂರೂಟಿ ಷರತ್ತಿನೊಂದಿಗೆ ಜಾಮೀನು ಮಂಜೂರು ಮಾಡಿದ 42ನೇ ACMM ನ್ಯಾಯಾಲಯ .
ಮಹಿಳೆ ಅಪಾರಣ ಪ್ರಕರಣದಲ್ಲಿ ಎಚ್ ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು ಇದೀಗ SIT ಹೈಕೋರ್ಟಿಗೆ ಜಾಮೀನು ರದ್ದು ಕೋರಿ ಮನವಿ ಸಲ್ಲಿಸಿದೆ.