
ಎಂಸಿಎ ವಿದ್ಯಾರ್ಥಿನಿ ನೇಹಾ ಹೀರೆಮಠ ಬರ್ಬರ ಕೊಲೆ…!!
ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ್ ಹೀರೆಮಠ ಅವರ ಪುತ್ರಿ ನೇಹಾ ಹೀರೆಮಠ ಕೊಲೆಯಾದ ವಿದ್ಯಾರ್ಥಿನಿ…!
ಅದೇ ಕಾಲೇಜಿನ ವಿದ್ಯಾರ್ಥಿ ಫಯಾಜ್ 9 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ…!!
ನೇಹಾಳನ್ನು ಪ್ರೀತಿಸುತಿದ್ದ ಫಯಾಜ್, ಪ್ರೀತಿ ನಿರಾಕರಿಸಿದ್ದಕ್ಕೆ ಬರ್ಬರ ಹತ್ಯೆ…!
ಹುಬ್ಬಳ್ಳಿ – ಯುವಕನೊಬ್ಬ ವಿದ್ಯಾರ್ಥಿನಿಯನ್ನು ಬಿವಿಬಿ ಕಾಲೇಜ್ ಕ್ಯಾಂಪಸ್ನಲ್ಲೇ ಕೊಲೆ ಮಾಡಿದ್ದಾನೆ…!
ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ್ ಹಿರೇಮಠ್ ಅವರ ಪುತ್ರಿ ನೇಹಾ ಹೀರೆಮಠ್ ಕೊಲೆಯಾದ ವಿದ್ಯಾರ್ಥಿನಿ. ಅದೇ ಕಾಲೇಜಿನ ವಿದ್ಯಾರ್ಥಿ ಫಯಾಜ್ 9 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ…!!
ಪ್ರಥಮ ವರ್ಷದ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿರುವ ನೇಹಾಗೆ ಕ್ಯಾಂಪಸ್ನಲ್ಲೇ 9 ಬಾರಿ ಚಾಕು ಇರಿದಿದ್ದಾನೆ. ತೀವ್ರವಾಗಿ ಗಾಯಗೊಂಡ ನೇಹಾಳನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ಆಕೆ ಕೊನೆಯುಸಿರೆಳೆದಿದ್ದಾಳೆ …!
ಕೊಲೆ ಮಾಡಿ ಪರಾರಿಯಾಗುತ್ತಿದ್ದಾಗ ಫಯಾಜ್ ನನ್ನು ಅಲ್ಲಿದ್ದ ವ್ಯಕ್ತಿಗಳು ಹಿಡಿದುಕೊಂಡು ಪೊಲೀಸರಿಗೆ ಒಪ್ಪಿಸಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಈಗ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ…!!
ಪ್ರೀತಿ ನಿರಾಕರಿಸಿದ್ದಕ್ಕೆ ಚಾಕು ಹಾಕಿದ ಫಯಾಜ್
ಕೊಲೆಯಾದ ನೇಹಾ ಹಿರೇಮಠ್ ಬಿವಿಬಿ ಕಾಲೇಜಿನಲ್ಲಿ ಎಂಸಿಎ ಓದುತ್ತಿದ್ದಳು. ಇನ್ನು ಕೊಲೆ ಆರೋಪಿ ಫಯಾಜ್ ಸಹ ಅದೇ ಕಾಲೇಜಿನಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದಾನೆ. ಹೀಗಾಗಿ ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ನೇಹಾಳನ್ನು ಕೊಲೆ ಮಾಡಿದ್ದಾನೆ. ಕಳೆದ ಕೆಲ ದಿನಗಳಿಂದ ಪ್ರೀತಿಸುವಂತೆ ನೇಹಾಳ ಬೆನ್ನುಬಿದ್ದಿದ್ದ. ಆದ್ರೆ, ನೇಹಾ ಪ್ರೀತಿಗೆ ನಿರಾಕರಿಸಿದ್ದಳು. ಇದರಿಂದ ಕೋಪಗೊಂಡು ಫಯಾಜ್, ನೇಹಾಳ ಕುತ್ತಿಗೆಯ 2 ಕಡೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ…!