
ಕೆಲವು ದಿನಗಳಿಂದ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗುತ್ತಿದ್ದು ರೈತರ ಮೊಗದಲ್ಲಿ ಸಂತಸ ಮೂಡಿದೆ
ಬಿಸಿಲಿನ ತಾಪದಿಂದ ಬರಿದಾದ ಜಲಾಶಯಗಳ ಒಡಲು ತುಂಬುತ್ತಿದೆ.
ಕಳೆದ ಕೆಲವು ದಿನಗಳಿಂದ ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಂಗಳೂರು,ಕೊಡಗು, ಬೆಳಗಾವಿ ಹುಬ್ಬಳ್ಳಿ, ಈ ಎಲ್ಲಾ ಭಾಗಗಳಲ್ಲಿಯೂ ಮಳೆಯಾಗುತ್ತಿದೆ.
ಸೋಮವಾರ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಿದೆ. ರಸ್ತೆಯಲ್ಲಿ ನೀರು ನಿಂತು, ತಗ್ಗು ಪ್ರದೇಶ ಜಲಾವೃತವಾಗಿ, ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿ, ವಿದ್ಯುತ್ ಸಂಪರ್ಕ ಕಡಿತಗೊಂಡು ಜನರು ಪರದಾಡಿದರು. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಯಿತು.
ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಳೆ ಮೈಸೂರು ಭಾಗದಲ್ಲಿ ಬೆಳೆ ಹಾನಿ ಸಮಭವಿಸಿದೆ. ಹಲವೆಡೆ ಸುರಿದ ಬಾರಿ ಮಳೆ ಭತ್ತ, ಬಾಳೆ, ತಂಬಾಕು, ಶುಂಠಿ ಬೆಳೆಗಳಿಗೆ ಹಾನಿಯಾಗಿದೆ . ಅರಕಲಗೂಡು ತಾಲೂಕಿನಲ್ಲಿ ಎಡೆಬಿಡದೆ ಸುರಿದ ಮಳೆಗೆ ಎಕರೆಗಟ್ಟಲೆ ಶುಂಠಿ ಬೆಳೆ ಹಾನಿಯಾಗಿದೆ.
ಇಂದು ಮತ್ತೆ ನಾಳೆ ರಾಜ್ಯದಲ್ಲಿ ಭಾರಿ ಮಳೆಯಾಗುವ ಸೂಚನೆ ನೀಡಿದ ಹವಾಮಾನ ಇಲಾಖೆ ರಾಜ್ಯದ ಆರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ನಿನ್ನೆ ಬೆಳಿಗ್ಗೆಯಿಂದ ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣ ಇತ್ತು ನಿನ್ನೆ ಸಂಜೆ ಹೊತ್ತಿಗೆ ಭಾರಿ ಮಳೆ ಸುರಿದಿದೆ
ದಾವಣಗೆರೆಯಲ್ಲಿ ಸುರಿದ ಭಾರಿ ಮಳೆಯಿಂದ ಜನ ಜೀವನ ಅಸ್ತವ್ಯಸ್ತಗೊಂಡು ರಸ್ತೆಗಳಲ್ಲಿ ನೀರು ತುಂಬಿತ್ತು.
ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆಗಳಿವೆ.