
ಬೆಂಗಳೂರು : ರಾಜ್ಯದಲ್ಲಿ ಮುಂದುವರಿದ ವರುಣಾರ್ಭಟ ಈಗಾಗಲೇ ಮುಂಗಾರು ಆರಂಭವಾಗಿದೆ, ಮೊದ ಮೊದಲು ಮಳೆ ಕಡಿಮೆಯಿದ್ದರೂ ಕಳೆದ ಒಂದು ವಾರದಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.ತುಂಬಿ ಹರಿಯುತ್ತಿರುವ ನದಿ ಕೆರೆಗಳು ಕೆಲವು ಜಿಲ್ಲೆಗಳಲ್ಲಿ ವರುಣನ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ,
ಉಡುಪಿ ದಕ್ಷಿಣ ಕನ್ನಡ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದೆ.
ಹವಾಮಾನ ಇಲಾಖೆ ಈಗ ಕರಾವಳಿ ಕರ್ನಾಟಕ ಸೇರಿದಂತೆ ಮಲೆನಾಡು, ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆ ಬೀಳಲಿದೆ ಎಂಬ ಮುನ್ಸೂಚನೆ ನೀಡಿದೆ. ಇನ್ನು ಮುಂದಿನ 7 ದಿನ ನಿರಂತರವಾಗಿ ಕರಾವಳಿ ಮಲೆನಾಡು ಭಾಗದಲ್ಲಿ ಮಳೆ ಆಗಲಿದೆ ಎಂದು ಹವಾಮಾನ ತಜ್ಞರು ಎಚ್ಚರಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಈ ಸಮಯದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ 1 ವಾರ ಇಲ್ಲೆಲ್ಲಾ ಭಾರಿ ಮಳೆ ಬೀಳುವ ಎಚ್ಚರಕೆ ನೀಡಲಾಗಿದೆ
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನ ಬಳಿ ಮಂಗಳವಾರ ಬೆಳಿಗ್ಗೆ ಬೀಸಿದ ಬಾರೀಗಾಳಿಗೆ ಹೋಟೆಲ್ ಮೇಲ್ಚಾವಣಿ ಹಾರಿ ಹೋಗಿದ್ದು ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
ಬೆಂಗಳೂರು ಅವಮಾನ ಇಲಾಖೆ ಕೇಂದ್ರದ ಮಳೆ ಮುನ್ಸೂಚನೆ ವರದಿ ಪ್ರಕಾರ ಜುಲೈ 3 ರ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದಲ್ಲಿ ಈ ಬಾರಿ ವಾಡಿಕೆಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಮುಂಗಾರು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅನಾಹುತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳ ಸಭೆ ನಡೆಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಮಂಗಳವಾರ ಮೈಸೂರಿನಲ್ಲಿ ಮಾತನಾಡಿದ ಅವರು ರಾಜ್ಯದ 24 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮುಂಗಾರು ಮಳೆಯಾಗಿದೆ. 208 ಮಿ.ಮೀ ವಾಡಿಕೆ ಮಳೆಯ ನಿರೀಕ್ಷೆ ಇತ್ತು. ಈಗಾಗಲೇ ರಾಜ್ಯಾದ್ಯಂತ 205 ಮಿ.ಮೀ ಮಳೆ ಆಗಿದೆ. ಜನಸಾಮಾನ್ಯರ ಆಸ್ತಿ, ಪ್ರಾಣಕ್ಕೆ ತೊಂದರೆಯಾಗದಂತೆ ಕ್ರಮ ವಹಿಸಲು ಅಧಿಕಾರಿಗಳ ಸಭೆ ಕರೆದಿದ್ದೇವೆ ಎಂದರು.