
ಚಿಕ್ಕಮಗಳೂರು – ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಪಾಕಿಸ್ತಾನ ಪರವಾಗಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧವಾಗಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಯುವಕನನ್ನು ಚಿಕ್ಕಮಗಳೂರಿನ ಕೊಪ್ಪ ಠಾಣೆ ಪೊಲೀಸರು ಬಂಧಿಸಿದ್ದಾರೆ…!
ಫೇಸ್ಬುಕ್ನಲ್ಲಿ “ಅಸ್ಗರ್” ಎನ್ನುವ ವ್ಯಕ್ತಿ ಪಾಕ್ ಪರ ಘೋಷಣೆ ಕೂಗಿದ್ದ ಈ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು, ಪ್ರಕರಣ ಸಂಬಂಧ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿ ಅಸ್ಗರ್ ಎನ್ನುವ ಯುವಕನ್ನು ವಶಕ್ಕೆ ತೆಗೆದುಕೊಂಡಿದ್ದು, ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ ಅಂಥ ತಿಳಿದು ಬಂದಿದೆ…!!
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಅವಾಚ್ಯ ಪದಗಳಿಂದ ನಿಂದಿಸಿ ಪೋಸ್ಟ್ ಹಾಕಿದ್ದಲ್ಲದೇ, ಬಜರಂಗದಳದ ವಿರುದ್ಧವೂ ಅವಾಚ್ಯ ಪದ ಬಳಕೆ ಮಾಡಿ ಪೋಸ್ಟ್ ಮಾಡಿದ್ದ…!
ನಂತರ ಈ ಫೇಸ್ ಬುಕ್ ಖಾತೆಯನ್ನು ಡಿಲೀಟ್ ಮಾಡಿದ್ದ…!!
ಆದರೆ ಡಿಲೀಟ್ ಆಗುವ ಮೊದಲು ಅವನ ಪೋಸ್ಟ್ ಗಳನ್ನು ಗಮನಿಸಿದ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು…!
ಕೊಪ್ಪ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ…!!