
ಬೆಂಗಳೂರು: ಕೆ ಎಸ್ ಈಶ್ವರಪ್ಪ ಮಾಜಿ ಮುಖ್ಯಮಂತ್ರಿಗಳು ಹಾಗೂ ಬಿಜೆಪಿ ಹಿರಿಯ ನಾಯಕರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ನಗರದ ಟಿಕೆಟ್ ಕೈ ತಪ್ಪಿತು ನಂತರ ಈಶ್ವರಪ್ಪನವರು ಪಕ್ಷದ ಪರವಾಗಿ ಕೆಲಸ ಕೂಡ ಮಾಡಿದ್ದರು.
ಆದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪುತ್ರನಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಕೊಡಿಸಬೇಕು ಎಂದು ಬಹಳ ಪ್ರಯತ್ನ ಪಟ್ಟರು ಆದರೆ ಟಿಕೆಟ್ ಮಿಸ್ ಆಯ್ತು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯ್ಯ ಅವರಿಗೆ ಬಿಜೆಪಿ ಟಿಕೆಟ್ ನೀಡಿತು.
ಪುತ್ರನಿಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಅಸಮಾಧಾನ ಗೊಂಡರು ಈಶ್ವರಪ್ಪನವರು ನಂತರ ಬಿಜೆಪಿ ಒಂದು ಕುಟುಂಬದ ಒಂದು ಕುಟುಂಬದ ಹಿಡಿತದಲ್ಲಿ ಇರಲು ನಾನು ಬಿಡುವುದಿಲ್ಲ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಈಶ್ವರಪ್ಪನವರು ಸ್ಪರ್ಧಿಸುತ್ತಾರೆ.
ಮೇ 7ನೇ ತಾರೀಕು ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಿತು ಅದರಲ್ಲಿ ಶಿವಮೊಗ್ಗ ಕೂಡ ಹೌದು ಆದರೆ
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಕೆ. ಎಸ್. ಈಶ್ವರಪ್ಪ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ತಮ್ಮ ವಿರುದ್ಧ ಅಪಪ್ರಚಾರ ನಡೆಸಿರುವ ರಾಘವೇಂದ್ರ ವಿರುದ್ಧ ಕ್ರಮ ಕೈಗೊಳ್ಳಬೇಕು, ಫಲಿತಾಂಶ ತಡೆ ಹಿಡಿಯಬೇಕು ಎಂದು ಮಂಗಳವಾರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.
2019 ರಲ್ಲಿ ನಾನು ಚುನಾವಣೆ ಪ್ರಚಾರದಲ್ಲಿ ಮಾಡಿದ ಭಾಷಣವನ್ನು ತಿರುಚಿ ವಿಡಿಯೊ ಬಿಡುಗಡೆ ಮಾಡಿದ್ದಾರೆ ಮತ್ತೆ ಪತ್ರಿಕೆಯಲ್ಲಿ ಪ್ರಕಟವಾದ ಸುದ್ದಿಯ ರೀತಿಯಲ್ಲಿ ಪೇಪರ್ ಕಟಿಂಗ್ ತುಣುಕೊಂದನ್ನು ಅವರು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಹಿಂದುತ್ವವನ್ನು ಪ್ರತಿಪಾದಿಸಿದ ಈಶ್ವರಪ್ಪ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾದ ನನ್ನನ್ನು ಬೆಂಬಲಿಸಿದ್ದಾರೆ ಎಂಬುದಾಗಿ ಸುಳ್ಳು ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ ಈ ಬಾರಿ ಚುನಾವಣೆಯಲ್ಲಿ ಸೋಲುವ ಭಯದಿಂದ ಬಿ ವೈ ರಾಘವೇಂದ್ರ ಅವರು ಈ ಕೆಲಸ ಮಾಡಿದ್ದಾರೆ ಎಂದು ಈಶ್ವರಪ್ಪ ಆರೋಪಿಸಿದ್ದಾರೆ.
ನಾನು ಚುನಾವಣೆ ಕಣದಿಂದ ಹಿಂದೆ ಸರಿದಿರುವುದಾಗಿ ಎಲ್ಲಿಯೂ ಹೇಳಿಲ್ಲ ಮತ್ತು ಯಾವುದೇ ಮಾಧ್ಯಮ ಹಾಗೂ ಪತ್ರಿಕೆಗಳಿಗೂ ಹೇಳಿಕೆ ನೀಡಿರಲಿಲ್ಲ. ಇದು ಷಡ್ಯಂತ್ರ’ ಎಂದು ಈಶ್ವರಪ್ಪ ತಿಳಿಸಿದರು.
‘ಈ ಸಂಬಂಧ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲೂ ದೂರು ದಾಖಲಿಸಿದ್ದೇನೆ. ಇದರ ತನಿಖೆ ಪೂರ್ಣಗೊಳ್ಳುವವರೆಗೆ ಫಲಿತಾಂಶವನ್ನು ತಡೆ ಹಿಡಿಯಬೇಕು’ ಎಂದು ಈಶ್ವರಪ್ಪ ಮನವಿ ಮಾಡಿದ್ದಾರೆ