
ತನ್ನ ಪುತ್ರನಿಗೆ ಟಿಕೆಟ್ ಸಿಗಲಿಲ್ಲ ಎಂದು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅವರನ್ನು ಬಿಜೆಪಿ, ಪಕ್ಷದಿಂದ ಉಚ್ಛಾಟನೆ ಮಾಡಿದೆ…!
ಬಿಜೆಪಿ ಪಕ್ಷದ ಶಿಸ್ತು ಸಮಿತಿ ಈಶ್ವರಪ್ಪನವರ ಮೇಲೆ ಶಿಸ್ತು ಕ್ರಮ ಕೈಗೊಂಡಿದ್ದು, ಮುಂದಿನ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಿ ಆದೇಶ ನೀಡಿದೆ…!!

ಪುತ್ರ ಕಾಂತೇಶ್ ಗೆ ಟಿಕೆಟ್ ನೀಡಲಿಲ್ಲ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಅವರ ಫ್ಯಾಮಿಲಿ ಕುಟುಂಬ ರಾಜಕಾರಣ ಮಾಡುತ್ತಿದೆ, ರಾಜ್ಯ ಬಿಜೆಪಿ ಒಂದು ಕುಟುಂಬದ ಹಿಡಿತದಲ್ಲಿದೆ ಎಂದು ಆರೋಪಿಸಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು…!
ಈಶ್ವರಪ್ಪ ಅವರ ಮನವೊಲಿಸಲು ಬಿಜೆಪಿಯ ಘಟಾನುಘಟಿ ನಾಯಕರು ಎಷ್ಟೇ ಪ್ರಯತ್ನಿಸಿದರೂ ಮನವೊಲಿಕೆ ಪ್ರಯತ್ನ ವಿಫಲವಾಗಿತ್ತು…!!
ಮೂರನೇ ಹಂತದ ಲೋಕಸಭಾ ಚುನಾವಣೆಗೆ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದ ಇಂದು ಈಶ್ವರಪ್ಪ ನಾಮಪತ್ರ ಹಿಂಪಡೆಯಬಹುದು ಎಂಬ ನಿರೀಕ್ಷೆ ಇತ್ತು, ಆದರೆ ಅವರು ಉಮೇದುವಾರಿಕೆ ಹಿಂಪಡೆಯದೆ ಸ್ಪರ್ಧೆಗೆ ಸಿದ್ಧ ಎಂದು ಸೂಚನೆ ನೀಡಿದ್ದಾರೆ…!
ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಈಶ್ವರಪ್ಪ ವಿರುದ್ಧ ಶಿಸ್ತು ಕ್ರಮ ಕೈಗೊಂಡಿದೆ…!!