
ಬಿ ಎಸ್ ವೈ ತವರಲ್ಲಿ ಶಮನವಾಗದ ಬಂಡಾಯ…!ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಇಂದು ನಾಮಪತ್ರ ಸಲ್ಲಿಕೆ…!!

ಹಾಲಿ ಸಂಸದ ಬಿ ವೈ ರಾಘವೇಂದ್ರರನ್ನು ಸೋಲಿಸಿ, ಪಕ್ಷವನ್ನು ಅಪ್ಪ ಮಕ್ಕಳ ಹಿಡಿತದಿಂದ ಹೊರಗೆ ತರುವುದೇ ನನ್ನ ಗುರಿ ಎಂದ ಈಶ್ವರಪ್ಪ…!
ಶಿವಮೊಗ್ಗ – ರಾಜ್ಯ ಬಿಜೆಪಿ ಬಿ ಎಸ್ ಯಡಿಯೂರಪ್ಪ ಕುಟುಂಬದ ಮುಷ್ಠಿಯಲ್ಲಿದೆ ಎಂದು ಆರೋಪಿಸಿ ಮತ್ತು ತಮ್ಮ ಪುತ್ರ ಕೆ ಕಾಂತೇಶ್ ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗಲಿಲ್ಲವೆಂದು ಮುನಿಸಿಕೊಂಡು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಇಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ…!
ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಹಾಗೂ ತಮ್ಮ ಶಕ್ತಿ ಪ್ರದರ್ಶನ ಮಾಡಿ ಚುನಾವಣಾಧಿಕಾರಿಗಳ ಕಚೇರಿಗೆ ಆಗಮಿಸಿದ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ತಮ್ಮ ನಾಮಪತ್ರ ಸಲ್ಲಿಸಿದರು…!!
ನಾಮಪತ್ರ ಸಲ್ಲಿಕೆಗೂ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಈ ರೀತಿ ಬೃಹತ್ ಸಂಖ್ಯೆಯಲ್ಲಿ ನನ್ನ ಬೆಂಬಲಕ್ಕೆ ನಿಂತ ಮತದಾರರಿಗೆ ಧನ್ಯವಾದಗಳು, ಇಂದು ಎಲ್ಲಾ ಜಾತಿ, ಧರ್ಮದ ಜನರು ನನಗೆ ಬೆಂಬಲ ನೀಡುತ್ತಿದ್ದಾರೆ. ಅವರೆಲ್ಲರ ಆಸೆ ನಾನು ಗೆಲ್ಲಬೇಕೆಂದು ಆಗಿದೆ ಎಂದರು…!
ಒಂದು ಕುಟುಂಬದ ಕೈಯಲ್ಲಿ ಪಕ್ಷ ಇರಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಿದ್ದಾರೆ, ಆದರೆ ಕರ್ನಾಟಕದಲ್ಲಿ ಬಿಎಸ್ ಯಡಿಯೂರಪ್ಪ ಅವರ ಮಗ ಬಿಜೆಪಿ ಅಧ್ಯಕ್ಷ ಮತ್ತು ಇನ್ನೊಬ್ಬರು ಸಂಸದರಾಗಿದ್ದಾರೆ…! ಕುಟುಂಬ ರಾಜಕೀಯದ ವಿರುದ್ಧ ನನ್ನ ಸ್ಪರ್ಧೆ, ಎರಡನೆಯದಾಗಿ ಸಿ ಟಿ ರವಿ, ಅನಂತಕುಮಾರ್ ಹೆಗಡೆ, ನಳಿನ್ ಕುಮಾರ್ ಕಟೀಲ್, ಪ್ರತಾಪ್ ಸಿಂಹ ಎಲ್ಲ “ಹಿಂದುತ್ವವಾದಿ” ನಾಯಕರನ್ನು ಹೊರಹಾಕಲಾಗಿದೆ. “ಹಿಂದುತ್ವವಾದಿ” ಗೆ ಸ್ಥಾನ ಸಿಗಲಿ ಎಂದು ಹೀಗೆ ಮಾಡುತ್ತಿದ್ದೇನೆ…! ಕರ್ನಾಟಕದ ಕಾರ್ಯಕರ್ತರು ಬಿಜೆಪಿ ನಾಯಕರ ಮೇಲೆ ಕೋಪಗೊಂಡಿದ್ದಾರೆ ಎಂದು ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಈಶ್ವರಪ್ಪ ಹೇಳಿದರು…!!
ಜಾಹಿರಾತುಗಳಿಗಾಗಿ ಸಂಪರ್ಕಿಸಿ : nithyadhvani@gmail.com