
ಬೆಂಗಳೂರು – ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಿದ್ದಾರೆ…!
ರಾಜ್ಯದಲ್ಲಿ 145ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಗೆ ಬಹುಮತ ದೊರೆತಿದೆ…!!
ದಕ್ಷಿಣ ಭಾರತದಲ್ಲಿ ಕರ್ನಾಟಕ ಬಿಜೆಪಿ ಭದ್ರಕೋಟೆ ಎಂಬುದನ್ನು ಜನರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸಾಬೀತುಪಡಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು…!
ರಾಜ್ಯದಿಂದ ಆಯ್ಕೆಯಾದ ನೂತನ ಬಿಜೆಪಿ ಹಾಗೂ ಜೆಡಿಎಸ್ ಸಂಸದರು ಹಾಗೂ ಕೇಂದ್ರ ಸಚಿವರಿಗೆ ಅರಮನೆ ಮೈದಾನದಲ್ಲಿ ರಾಜ್ಯ ಬಿಜೆಪಿ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿ ಮುಂದಿನ ದಿನಗಳು ನಮ್ಮ ಪಾಲಿಗೆ ಹೋರಾಟದ ದಿನಗಳಾಗಿವೆ, ಅಧಿವೇಶನದ ನಂತರ ರಾಜ್ಯವ್ಯಾಪಿ ಪ್ರವಾಸ ಮಾಡಿ ಪಕ್ಷ ಸಂಘಟನೆಗೆ ಶಕ್ತಿ ತುಂಬುತ್ತೇವೆ, ಬಿಜೆಪಿ ಜೆಡಿಎಸ್ ಒಂದಾಗಿ ಆಡಳಿತ ಪಕ್ಷ ಕಾಂಗ್ರೆಸ್ ನ ಸೊಕ್ಕು ಮುರಿಯುತ್ತೇವೆ ಎಂದು ಹೇಳಿದರು…!!
ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಆಮಿಷದ ನಡುವೆಯೂ ರಾಜ್ಯದ ಜನ ಬಿಜೆಪಿ ಹಾಗೂ ಜೆಡಿಎಸ್ ಗೆ ಆಶೀರ್ವಾದ ಮಾಡಿದ್ದಾರೆ, ಕಾಂಗ್ರೆಸ್ ಗೂಬೆ ಕೂರಿಸುತ್ತಿದ್ದರೂ ಅದನ್ನು ಧಿಕ್ಕರಿಸಿ ಜನ ನಮಗೆ ಆಶೀರ್ವಾದ ಮಾಡಿದ್ದಾರೆ, 9 ಕ್ಷೇತ್ರಗಳಲ್ಲಿ ಗೆದ್ದು ಕಾಂಗ್ರೆಸ್ ತನ್ನ ಬೆನ್ನನ್ನು ತಾನೇ ತಟ್ಟಿಕೊಳ್ಳುತ್ತಿದೆ, ಎಂದು ವ್ಯಂಗ್ಯವಾಡಿದರು…!
ಕಾಂಗ್ರೆಸ್ ನ ಪ್ರಭಾವಿ ಸಚಿವರು ಇರುವ ಕ್ಷೇತ್ರಗಳಲ್ಲಿಯೇ ಎನ್ಡಿಎ ಲೀಡ್ ಪಡೆದುಕೊಂಡಿದೆ ಎಂದು ಹೇಳಿದರು…!!