
ನವದೆಹಲಿ – ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಅವರ ಹೆಸರನ್ನು ಪಕ್ಷದ ಹೈಕಮಾಂಡ್ ಬಹುತೇಕ ಅಂತಿಮಗೊಳಿಸಿದೆ ಎಂದು ಬಿಜೆಪಿಯ ಉನ್ನತ ಮೂಲಗಳು ತಿಳಿಸಿವೆ…!
ಫಡ್ನವೀಸ್ ಅವರು ಮುಂದಿನ ವಾರ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ನವದೆಹಲಿಗೆ ತೆರಳುವ ಸಾಧ್ಯತೆ ಇದೆ…!!
ಕೆಲವು ದಿನಗಳ ಹಿಂದೆ ನವದೆಹಲಿಯಲ್ಲಿ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಅಧಿಕೃತ ನೀತಿ ಆಯೋಗದ ಸಭೆಯ ನಂತರ, ಪ್ರಧಾನಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಎಲ್ಲಾ ಬಿಜೆಪಿ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದರು…!
ಈ ಸಭೆಯ ನಂತರ ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಅವರ ಜೊತೆಗೆ ಗುಪ್ತ ಸಭೆಯನ್ನು ನಡೆಸಿದರು…!!
ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ಕುರಿತಂತೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದ್ದು, ಇದಕ್ಕೆ ದೇವೇಂದ್ರ ಫಡ್ನವೀಸ್ ಕೂಡ ಒಪ್ಪಿಗೆ ಸೂಚಿಸಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂದಿನ ಕೆಲ ವಾರಗಳಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ…!
ಹಾಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಅಧಿಕಾರವಧಿ ಈಗಾಗಲೇ ಪೂರ್ಣಗೊಂಡಿದ್ದು, ಮುಂಬರುವ ದಿನಗಳಲ್ಲಿ ಮಹಾರಾಷ್ಟ್ರ ಸೇರಿದಂತೆ ಕೆಲ ರಾಜ್ಯಗಳ ವಿಧಾನಸಭೆ ಚುನಾವಣೆ ಇರುವುದರಿಂದ ಅಷ್ಟರೊಳಗಾಗಿ ನೂತನ ಅಧ್ಯಕ್ಷರನ್ನು ಬಿಜೆಪಿ ನೇಮಿಸಿಕೊಳ್ಳಬೇಕಾಗಿದೆ…!!