
ವಿಧಾನಪರಿಷತ್ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಬಿಜೆಪಿ ಮೂರು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದೆ…!
ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸಿಟಿ ರವಿ ಸೋಲು ಕಂಡಿದ್ದರು ಈಗ ಬಿಜೆಪಿ ಹೈಕಮಾಂಡ್ ಸಿಟಿ ರವಿ ಅವರಿಗೆ ಪರಿಷತ್ ಟಿಕೆಟ್ ನೀಡಿ ಬಂಪರ್ ಗಿಫ್ಟ್ ನೀಡಿದೆ.’
ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ ಕೊನೆಯ ದಿನವಾಗಿದೆ…!!
ಹೀಗಾಗಿ ಇಂದು ಬಿಜೆಪಿ ಹೈಕಮಾಂಡ್ ಅಂತಿಮವಾಗಿ ತನ್ನ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದು, ಸಿಟಿ ರವಿಗೆ ಲಕ್ ಖುಲಾಯಿಸಿದೆ…!
ಬಿಜೆಪಿ ಹೈಕಮಾಂಡ್ ಮಾಜಿ ಸಚಿವ ಸಿ ಟಿ ರವಿ, ಎನ್ ರವಿಕುಮಾರ್ ಮತ್ತು ಎಂ ಜಿ ಮೂಳೆ ಅವರಿಗೆ ಮಣೆ ಹಾಕಿದೆ…!!
ಒಟ್ಟು 11 ಕ್ಷೇತ್ರಗಳ ಪೈಕಿ ಬಿಜೆಪಿ ಸಂಖ್ಯಾಬಲದ ಆಧಾರದ ಮೇಲೆ ಮೂರು ಸ್ಥಾನಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯವಿದೆ…!
ಹೀಗಾಗಿ ಮೂರು ಅಭ್ಯರ್ಥಿಗಳನ್ನು ಘೋಷಿಸಿದ್ದು, ಎನ್ ರವಿ ಕುಮಾರ್ ಅವರಿಗೆ ಮತ್ತೊಮ್ಮೆ ಚಾನ್ಸ್ ಕೊಟ್ಟರೆ, ಸಿ ಟಿ ರವಿ ಅವರಿಗೆ ಬಂಪರ್ ಗಿಫ್ಟ್ ಕೊಟ್ಟಿದೆ…!!
