
ನವದೆಹಲಿಯಲ್ಲಿ ಇಂದು ಎನ್ ಡಿ ಎ ಮೈತ್ರಿಕೂಟದ ನಾಯಕರ ಸಭೆ ನಡೆದಿದ್ದು, ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು NDA ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ…!
ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗ್ರಹ ಸಚಿವ ಅಮಿತ್ ಷಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು, ಜೆಡಿಎಸ್ ನಾಯಕ ಕುಮಾರಸ್ವಾಮಿ ಸೇರಿದಂತೆ ಎನ್ ಡಿ ಎ ನಾಯಕರು ಭಾಗವಹಿಸಿದ್ದರು…!!
ಎನ್ ಡಿ ಎ ನಾಯಕರು ತಮ್ಮ ಬೆಂಬಲದ ಪತ್ರವನ್ನು ಜೆಪಿ ನಡ್ಡಾ ಅವರಿಗೆ ಹಸ್ತಾಂತರಿಸಿದರು…!
ಸಭೆಯಲ್ಲಿ ಜೂನ್ 7 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಸರ್ಕಾರ ರಚನೆ ಮಾಡಲು ಹಕ್ಕೊತ್ತಾಯ ಮಂಡಿಸುವ ನಿರ್ಣಯ ಕೈಗೊಳ್ಳಲಾಯಿತು…!!
ಜೂನ್ 7 ರಂದು ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಆ ಬಳಿಕ ರಾಷ್ಟ್ರಪತಿಯವರನ್ನು ನರೇಂದ್ರ ಮೋದಿ ಭೇಟಿ ಮಾಡಲಿದ್ದಾರೆ…!
ಜೂನ್ 8 ರಂದು ಭಾರತದ ಪ್ರಧಾನ ಮಂತ್ರಿಯಾಗಿ ಮೂರನೇ ಬಾರಿಗೆ ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ…!!